ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಜೆ.ಹೆಚ್ ಪಟೇಲ್ ಅವಧಿಯಲ್ಲಿ ಸಿದ್ದರಾಮಯ್ಯ ಲಾಭಿ: ಎಚ್‌ಡಿಕೆ

ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಹೆಚ್ ಪಟೇಲ್ ಅವರ ಅವಧಿಯಲ್ಲಿ ಸಿದ್ದರಾಮಯ್ಯ...

Mainashree
Updated On : 13 Aug 2014, 5:28 am

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಹೆಚ್ ಪಟೇಲ್ ಅವರ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಲಾಬಿ ಮಾಡಿದ್ದಾರೆ ಎಂದು ಮಾಜಿ ಮುಖ್ಯಂತ್ರಿ ಕುಮಾರಸ್ವಾಮಿ ಬುಧವಾರ ಆರೋಪಿಸಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ಧಿಗೋಷಿ ನಡೆಸಿದ ಅವರು, ಜೆ.ಹೆಚ್ ಪಟೇಲ್ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಲಾಭಿ ಮಾಡಿದ್ದು, ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

2011ನೇ ಸಾಲಿನ ಕೆಪಿಎಸ್‌ಸಿ ನೇಮಕಾತಿ ರದ್ದು ವಿಚಾರ ಕುರಿತು ಪ್ರತಿಕ್ರಯಿಸಿದ ಅವರು, ಸಚಿವ ಜಯಚಂದ್ರಗೆ ಕಾನೂನಿನ ಬಗ್ಗೆ ಅರಿವಿದೆಯಾ?. ಸರ್ಕಾರ ಕಾನೂನು ಬಗ್ಗೆ ತಿಳಿದುಕೊಂಡು ಸರ್ಕಾರ ನಡೆಸಲಿ ಎಂದು ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದಾರೆ. ನಾನು ಹೆಚ್.ಎನ್ ಕೃಷ್ಣ ಅವರನ್ನು ಕೆಪಿಎಸ್‌ಸಿ ಸದಸ್ಯರನ್ನಾಗಿ ನೇಮಕ ಮಾಡಿದ್ದೇನೆಂದು ಹೇಳಿದ್ದಾರೆ. ಹೀಗೆ ಹೇಳಿದ್ದು ನಿಜವಾದರೆ ಸಿಎಂ ಸುಳ್ಳುಗಾರಗಾತ್ತಾರೆ.

ಏಕೆಂದರೆ ಎಸ್.ಎಂ ಕೃಷ್ಣ ಅವಧಿಯಲ್ಲಿ ಹೆಚ್.ಎನ್ ಕೃಷ್ಣ ಅವರನ್ನು ಕೆಪಿಎಸ್‌ಸಿ ಸದಸ್ಯರಾಗಿ ಕಾಂಗ್ರೆಸ್ ನೇಮಕ ಮಾಡಿದೆ. ದೇಶದ ಸಂವಿಧಾನದ ಬಗ್ಗೆ ಸರ್ಕಾರ ತಿಳಿದುಕೊಳ್ಳಲಿ ನಂತರ ಅಧಿಕಾರ ನಡೆಸಲಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement