ಶಿಕಾರಿಪುರದಲ್ಲಿ ಜೆಡಿಎಸ್‌ಗೆ ಶಕ್ತಿ ಇದೆ: ಸಿಎಂ
ಶಿಕಾರಿಪುರದಲ್ಲಿ ಜೆಡಿಎಸ್‌ಗೆ ಶಕ್ತಿ ಇದೆ ಅದನ್ನು ಉಪಚುನಾವಣೆಗಾಗಿ ಬಳಕೆ ಮಾಡಿಕೊಳ್ಳುತ್ತೇವೆ..
ಶಿಕಾರಿಪುರ: ಶಿಕಾರಿಪುರದಲ್ಲಿ ಜೆಡಿಎಸ್‌ಗೆ ಶಕ್ತಿ ಇದೆ ಅದನ್ನು ಉಪಚುನಾವಣೆಗಾಗಿ ಬಳಕೆ ಮಾಡಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಶಿಕಾರಿಪುರ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಹಿನ್ನೆಲೆ ನಾವು ಜೆಡಿಎಸ್ ಬೆಂಬಲ ಕೇಳಿದ್ದೇವೆ. ಶಿಕಾರಿಪುರದಲ್ಲಿ ಜೆಡಿಎಸ್‌ಗೆ ಶಕ್ತಿ ಇದೆ ಅದನ್ನು ಬಳಕೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ಶಿಕಾರಿಪುರ ಜೆಡಿಎಸ್ ಮುಖಂಡ ಹೆಚ್.ಟಿ ಬಳಿಗಾರ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ಬಳಿಗಾರ್ ಕಾಂಗ್ರೆಸ್ ಬೆಂಬಲಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಜೊತೆ ದೂರವಾಣಿ ಮೂಲಕ ಚರ್ಚಿಸಿದ್ದೇನೆ. ಜೆಡಿಎಸ್ ನಾಯಕರು ಬೆಂಬಲಿಸುವುದಾಗಿ ತಿಳಿಸಿದ್ದಾರೆ ಎಂದ ಸಿಎಂ, ಬಳ್ಳಾರಿ, ಶಿಕಾರಿಪುರದಲ್ಲಿ ಕಾಂಗ್ರೆಸ್‌ನಿಂದ ಯಾವುದೇ ಆಪರೇಷನ್ ಹಸ್ತ ನಡೆಯುತ್ತಿಲ್ಲ ಎಂದು ಸ್ಪಷ್ಟನೇ ನೀಡಿದ್ದಾರೆ.