ಹೆಚ್.ಡಿ.ಕೋಟೆ ಬಳಿ ಭೀಕರ ಅಫಘಾತ, 5 ಸಾವು
ಹೆಚ್.ಡಿ.ಕೋಟೆಯ ಲಕ್ಷ್ಮೀಪುರದ ಬಳಿ ಸಂಭವಿಸಿದ ಭೀಕರ ಕಾರು ಅಫಘಾತದಿಂದಾಗಿ ಒಂದೇ ಕುಟುಂಬದ ಐವರು ಧಾರುಣವಾಗಿ ಸಾವನ್ನಪ್ಪಿದ್ದಾರೆ.
ಹೆಚ್.ಡಿ.ಕೋಟೆ: ಹೆಚ್.ಡಿ.ಕೋಟೆಯ ಲಕ್ಷ್ಮೀಪುರದ ಬಳಿ ಸಂಭವಿಸಿದ ಭೀಕರ ಕಾರು ಅಫಘಾತದಿಂದಾಗಿ ಒಂದೇ ಕುಟುಂಬದ ಐವರು ಧಾರುಣವಾಗಿ ಸಾವನ್ನಪ್ಪಿದ್ದಾರೆ.
ಅಂತರ ಸಂತೆ ಹ್ಯಾಂಡ್ ಪೋಸ್ಟ್ ಬಳಿ ಇರುವ ಮಂಜುನಾಥ್ ಛತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸ್ಕಾರ್ಪಿಯೋ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಅಫಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ಕಳೆದು ಕೊಂಡ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನ ಮುಂದಿನ ಚಕ್ರ ದಿಢೀರ್ ಪಂಚರ್ ಆದ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಕಾರಿನಲ್ಲಿ ಒಟ್ಟು 12 ಮಂದಿ ಪ್ರಯಾಣಿಸಿದ್ದರು ಎಂದು ತಿಳಿದುಬಂದಿದ್ದು, ಅಂತರ ಸಂತೆ ನಿವಾಸಿಗಳಾದ ಸುಜಾತ(40), ಗೌರಮ್ಮ (65), ಕನ್ಯಾಕುಮಾರಿ (45), ಗೌರಮ್ಮ (60) ಮತ್ತು ಪ್ರೇಮ (50) ಅವರು ಮೃತ ದುರ್ಧೈವಿಗಳಾಗಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇತರೆ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಲಕ್ಷ್ಮೀಪುರದ ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.