ಆಗಸ್ಟ್ 22ಕ್ಕೆ ಪುಸ್ತಕ ಮೇಳ
ಬೆಂಗಳೂರು: ಹ್ಯಾಪಿ ಕ್ಲಬ್ ಈವೆಂಟ್ಸ್ ಸಂಸ್ಥೆಯು ಆಗಸ್ಟ್ 22 ರಿಂದ 31ರವರೆಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಪುಸ್ತಕ ಮೇಳವನ್ನು ಆಯೋಜಿಸಿದೆ.
ಬೆಳಿಗ್ಗೆ 11 ಗಂಟೆಯಿಂದ ಪ್ರಾರಂಭವಾಗುವ ಈ ಪುಸ್ತಕ ಮೇಳ ರಾತ್ರಿ 8 ಗಂಟೆಯವರೆಗೆ ನಡೆಯಲಿದ್ದು, ಕಾರ್ಯಕ್ರಮವನ್ನು ಸಾಹಿತಿ ಡಾ.ಸಿದ್ದಲಿಂಗಯ್ಯ ಉದ್ಘಾಟಿಸಲಿದ್ದಾರೆ. ಸುಮಾರು 130 ಮಳಿಗೆಗಳು ಮೇಳದಲ್ಲಿ ಭಾಗವಹಿಸಲಿದೆ.
ಮೇಳದಲ್ಲಿ ಭಾಗವಹಿಸುವವರಿಗೆ ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು, ಸುಗಮ ಸಂಗೀತ, ವಾದ್ಯಗೋಷ್ಠಿ, ನೃತ್ಯ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಸ್ಥೆಯು ಆಯೋಜಿಸಿದೆ. ಮೇಳದಲ್ಲಿ ಮಳಿಗೆ ಹೊಂದಿದವರು ಹೊಸ ಪುಸ್ತಕಗಳನ್ನು ಬಿಡುಗಡೆ ಮಾಡಲು ವ್ಯವಸ್ಥೆಯನ್ನು ಸಂಸ್ಥೆ ಕಲ್ಪಿಸಿದೆ.