ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಸಿಟಿ ರೈಲ್ವೆ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರಿಡುವಂತೆ ಆಗ್ರಹ

Srinivasa Murthy VN
Updated On : 14 Aug 2014, 8:30 am

ಬೆಂಗಳೂರು: ಬ್ರಿಟೀಷರ ವಿರುದ್ದ ಹೋರಾಡಿ ದೇಶಕ್ಕಾಗಿ ಹುತಾತ್ಮನಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹೆಸರನ್ನು ಸಿಟಿ ರೈಲ್ವೆ ನಿಲ್ದಾಣಕ್ಕಿಡುವಂತೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕನ್ನಡ ಸೇನೆ ಆಗ್ರಹಿಸಿದೆ.

ಈ ಕುರಿತು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕನ್ನಡ ಸೇನೆ ಗೌರವಾಧ್ಯಕ್ಷ ಜಾಣಗೆರೆ ವೆಂಕಟರಾಮಯ್ಯ ಅವರು, ಕನ್ನಡ ನಾಡಿನ ಹೆಮ್ಮೆಯ ಪುತ್ರನಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ 200 ವರ್ಷಗಳ ಕಾಲ ಭಾರತ ದೇಶವನ್ನಾಳಿದ ಬ್ರಿಟಿಷರ ಆಳ್ವಿಕೆಯ ವಿರುದ್ದ ಹೋರಾಡಿದ್ದನು. ದೇಶವಾಸಿಗಳು ನಡೆಸಿದ ಪಿತೂರಿಯಿಂದ ಬ್ರಿಟೀಷ ಅಧಿಕಾರಿಗಳಿಂದ ನೇಣುಗಂಭವೇರಿ ಹುತಾತ್ಮನಾದದ್ದು ಎಲ್ಲರಿಗೂ ತಿಳಿದಿರುವ ವಿಷಯ.

ಆದರೆ ದೇಶಕ್ಕಾಗಿ ಹೋರಾಡಿ ಪ್ರಾಣತೆತ್ತ ಯೋಧನನ್ನು ನೆನೆಯುವಂತೆ ಮಾಡುವುದು ಎಲ್ಲರ ಕರ್ತವ್ಯ. ಆದರೆ ಇಂತಹ ಯೋಧನನ್ನು ನೆನೆಯದಂತೆ ಇಂದಿನ ಸರ್ಕಾರ ಕುಳಿತಿದೆ. ಈಗಲಾದರು ಸರ್ಕಾರ ನಮ್ಮ ಆಗ್ರಹಕ್ಕೆ ಎಚ್ಚೆತ್ತುಕೊಂಡು ಬೆಂಗಳೂರಿನ ಸಿಟಿ ರೈಲ್ವೆ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಅವರ ನಾಮಧೇಯ ಮರು ನಾಮಕರಣ ಮಾಡಿ ಪ್ರತಿಯೊಬ್ಬ ವ್ಯಕ್ತಿಯೂ ಕ್ರಾಂತಿವೀರನನ್ನು ನೆನೆಯುವಂತೆ ಮಾಡಲಿ ಎಂದು ಆಗ್ರಹಿಸಿದ್ದಾರೆ.

ಗೋಷ್ಠಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕನ್ನಡ ಸೇನೆ ಅಧ್ಯಕ್ಷ ಎಸ್.ಡಿ.ಚಿಕ್ಕಣ್ಣ, ಹಿರಿಯ ಕವಿ ದ್ವಾರನಕುಂಟೆ ಪಾತಣ್ಣ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement