ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಕೆಪಿಎಸ್‌ಸಿ: ಸಿಬಿಐ ತನಿಖೆ ಇಲ್ಲ ಸಿಎಂ ಸ್ಪಷ್ಟೋಕ್ತಿ

ಕೆಪಿಎಸ್‌ಸಿ ಹಗರಣವನ್ನು ಸಿಬಿಐ ತನಿಖೆ...

Vishwanath S
Updated On : 15 Aug 2014, 9:53 am

ಬಿಜಾಪುರ: ಕೆಪಿಎಸ್‌ಸಿ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಾಖಂಡಿತವಾಗಿ ಹೇಳಿದ್ದಾರೆ.

ಗುರುವಾರ ಆಟಮಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ತನಿಖಾ ಸಂಸ್ಥೆಯಾದ ಸಿಐಡಿ ಮೇಲೆ ತಮ್ಮ ಸರ್ಕಾರಕ್ಕೆ ಸಂಪೂರ್ಣ ನಂಬಿಕೆ ಇದೆ. ವಿರೋಧ ಪಕ್ಷದವರು ಕೆಪಿಎಸ್‌ಸಿ ಅಕ್ರಮವನ್ನು ಸಿಬಿಐಗೆ ಒಪ್ಪಿಸಲು ಒತ್ತಾಯಿಸುತ್ತಿದ್ದಾರೆ. ಆದರೆ ವಿರೋಧ ಪಕ್ಷದವರು ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿರುವಾಗ ಇಂತಹ ಯಾವ ಅಕ್ರಮಗಳನ್ನು ಸಿಬಿಐ ತನಿಖೆಗೆ ಒಪ್ಪಿಸಿದ್ದಾರೆ ಎಂಬುದನ್ನು ಹೇಳಬೇಕು ಎಂದರು.

ಕೂಡಗಿ ಉಷ್ಣ ವಿದ್ಯುತ್ ಸ್ಥಾವರದಿಂದ ಯಾವುದೇ ಬಾಧಕವಿಲ್ಲ ಎಂಬುದನ್ನು ಮನವರಿಕೆ ಮಾಡಲು ಬೆಂಗಳೂರಿನಲ್ಲಿ ಶೀಘ್ರದಲ್ಲಿಯೇ ಬಿಜಾಪುರ ಜಿಲ್ಲೆಯ 200 ರೈತರೊಂದಿಗೆ ಸಭೆ ನಡೆಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement