ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಕೆಪಿಎಸ್‌ಸಿ: ಬಗ್ಗದ ಸರ್ಕಾರ, ನಿರಶನ ಕೈಬಿಡಲು ಅಭ್ಯರ್ಥಿಗಳ ನಿರ್ಧಾರ

2011ರ ಕೆಪಿಎಸ್‌ಸಿ ನೇಮಕಾತಿ ರದ್ದತಿ ವಿರುದ್ಧ ಕಳೆದ 29...

Srinivasa Murthy VN
Updated On : 17 Aug 2014, 10:02 am

ಬೆಂಗಳೂರು: 2011ರ ಕೆಪಿಎಸ್‌ಸಿ ನೇಮಕಾತಿ ರದ್ದತಿ ವಿರುದ್ಧ ಕಳೆದ 29 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ಕೈ ಬಿಡಲು ಅಭ್ಯರ್ಥಿಗಳು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ನೊಂದ ಅಭ್ಯರ್ಥಿಗಳ ಆಗ್ರಹಕ್ಕೆ ಸರ್ಕಾರ ಮಣಿಯದ ಹಿನ್ನಲೆಯಲ್ಲಿ ತಮ್ಮ ನಿರಶನವನ್ನು ಕೈಬಿಡಲು ಅಭ್ಯರ್ಥಿಗಳು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. 2011ರಲ್ಲಿ ನಡೆದಿದ್ದ ಕರ್ನಾಟಕ ಲೋಕಸೇವಾ ಆಯೋಗದ 362 ನೇಮಕಾತಿಯಲ್ಲಿ ಅಕ್ರಮದ ವಿಚಾರಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ನಡೆಸಿದ್ದ ತನಿಖೆಯಲ್ಲಿ ಅಕ್ರಮ ಬಯಲಾದ ಪರಿಣಾಮ ರಾಜ್ಯ ಸರ್ಕಾರ ನೇಮಕಾತಿಯನ್ನು ರದ್ದತಿ ಮಾಡಿತ್ತು. ಈ ಹಿನ್ನಲೆಯಲ್ಲಿ ಭುಗಿಲೆದ್ದಿದ್ದ ಪ್ರತಿಭಟನೆಯನ್ನು ಸತತ 29 ದಿನಗಳ ನಂತರ ಕೈಬಿಡಲಾಗುತ್ತಿದೆ.

ಸರ್ಕಾರದಿಂದ ಯಾವುದೇ ನ್ಯಾಯ ಸಿಗುವುದಿಲ್ಲ. ಹೀಗಾಗಿ ನಾವು ನಮ್ಮ ಪ್ರತಿಭಟನೆಯನ್ನು ಮತ್ತು ನಿರಶನವನ್ನು ಕೈಬಿಡುತ್ತಿದ್ದೇವೆ. ಆದರೆ ನಮ್ಮ ಕಾನೂನು ಹೋರಾಟವನ್ನು ಮುಂದುವರೆಸುತ್ತೇವೆ ಎಂದು ಪ್ರತಿಭಟನಾ ನಿರತ ಅಭ್ಯರ್ಥಿಗಳು ಹೇಳಿದ್ದಾರೆ. ಅಲ್ಲದೆ ಇದೇ ಆಗಸ್ಟ್ 20ರಂದು ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ನಡೆಸುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ.

362 ಹುದ್ದೆಗಳಿಂದ 600ಕ್ಕೆ ಏರಿಕೆ: 10ದಿನದಲ್ಲಿ ಸರ್ಕಾರದ ಅಧಿಸೂಚನೆ
2011ರ ನೇಮಕಾತಿ ರದ್ದಾಗಿರುವ ಹಿನ್ನಲೆಯಲ್ಲಿ ನೂತನ ನೇಮಕಾತಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಕಾನೂನು ಸಚಿವ ಟಿಬಿ ಜಯಚಂದ್ರ ಅವರು ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಜಯಚಂದ್ರ ಅವರು, ಹಾಲಿ ಇರುವ 362 ಹುದ್ದೆಗಳನ್ನು 600ಕ್ಕೆ ಏರಿಕೆ ಮಾಡಲಾಗುವುದು. ನೂತನ ನೇಮಕಾತಿ ಕುರಿತಂತೆ ಇನ್ನು ದಿನದಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement