ರಾಜಕೀಯ ವೈಷಮ್ಯ: ಬೀದರ್ನಲ್ಲಿ ಫೈರಿಂಗ್, ಓರ್ವನಿಗೆ ಗಾಯ
ಬೀದರ್ ಜಿಲ್ಲೆಯ ಬಾಲ್ಕಿ ತಾಲ್ಲೂಕಿನಲ್ಲಿ 2 ಗುಂಪಿನ...
ಬೀದರ್: ಬೀದರ್ ಜಿಲ್ಲೆಯ ಬಾಲ್ಕಿ ತಾಲ್ಲೂಕಿನಲ್ಲಿ ಎರಡು ಗುಂಪಿನ ನಡುವೆ ಗುಂಡಿನ ದಾಳಿ ನಡೆದಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ.
ರಾಜಕೀಯ ವೈಷಮ್ಯದ ಹಿನ್ನಲೆಯಲ್ಲಿ ಫೈರಿಂಗ್ ನಡೆದಿದೆ ಎನ್ನಲಾಗುತ್ತಿದ್ದು, ಚಂದ್ರಕಾಂತ್ ಎಂಬ ವ್ಯಕ್ತಿಯ ಕಾಲಿಗೆ ಗುಂಡು ತಗುಲಿದೆ. ವಿರೋಧಿ ಗುಂಪಿನ ಯುವಕರು ಚಂದ್ರಕಾಂತ್ನನ್ನು ಬೆನ್ನಟ್ಟಿ ಎರೆಡೆರಡು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಚಂದ್ರಕಾಂತ್ನ ಕಾಲಿಗೆ ಗುಂಡು ತಗುಲಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಬಾಲ್ಕಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.