ಆ. 20ರಂದು ದೇವರಾಜು ಅರಸುರ 99ನೇ ಜನ್ಮದಿನಾಚರಣೆ ಸಮಾರಂಭ
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗವು ಆಗಸ್ಟ್ 20ರಂದು ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಅವರ 99ನೇ ಜನ್ಮದಿನಾಚರಣೆಯನ್ನು ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದೆ.
ಈ ಕುರಿತು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಲೋಕಸಭಾ ಸದಸ್ಯ ಡಾ. ಬಿ.ಎಲ್. ಶಂಕರ್ ಸಮಾಜದಲ್ಲಿ ನ್ಯಾಯ ಹಾಗೂ ಸಮಾನತೆಗಾಗಿ ತಮ್ಮ ಜೀವನವನ್ನೇ ಸವೆಸಿರುವ ದಿವಂಗತ ಡಿ. ದೇವರಾಜ ಅರಸು ಅವರ 99ನೇ ಜನ್ಮದಿನ ಸಮಾರಂಭವನ್ನು ಕೆಪಿಸಿಸಿ ವಿಭಾಗ ಹಾಗೂ ಇತರೆ ಹಿಂದುಳಿದ ವರ್ಗಗಳು ಸೇರಿ ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಡಿ. ದೇವರಾಜ ಅರಸು ಸ್ಮಾರಕ ಗೌರವ ಪುರಸ್ಕಾರವನ್ನು ಕರ್ನಾಟಕದ ಖ್ಯಾತ ಹಿಂದೂಸ್ತಾನಿ ಗಾಯಕ ಡಾ. ಎಂ. ವೆಂಕಟೇಶ ಕುಮಾರ ಅವರಿಗೆ ನೀಡಲಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿ ಸಿದ್ಧರಾಮಯ್ಯ, ಲೋಕಸಭಾ ಕಾಂಗ್ರೆಸ್ ಪಕ್ಷ ನಾಯಕ ಎಂ.ಮಲ್ಲಿಕಾರ್ಜುನ ಖರ್ಗೆ ವಹಿಸಲಿದ್ದಾರೆ ಎಂದರು.