ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಜೆಡಿಎಸ್ ಪಕ್ಷದಲ್ಲಿ ಹಣವಿಲ್ಲ: ಹೆಚ್.ಡಿ ದೇವೇಗೌಡ

ಜೆಡಿಎಸ್ ಪಕ್ಷದಲ್ಲಿ ಹಣವಿಲ್ಲ ಎಂದು ಮಾಜಿ ಪ್ರಧಾನಿ...

Mainashree
Updated On : 18 Aug 2014, 5:36 am

ಬೆಂಗಳೂರು: ಜೆಡಿಎಸ್ ಪಕ್ಷದಲ್ಲಿ ಹಣವಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸೋಮವಾರ ಹೇಳಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಹಣವಿಲ್ಲ. ಜೆಡಿಎಸ್ ಕಚೇರಿಯನ್ನು ಕಿತ್ತುಕೊಳ್ಳಲಾಗುತ್ತಿದೆ ಎಂದು ವಿಷಾಧಿಸಿದ್ದಾರೆ.

ಸಮಾವೇಶಕ್ಕೆ ಬರದ ಶಾಸಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ದೇವೇಗೌಡ, ರಾಜಕೀಯದಲ್ಲಿ ನಾನು ಅನಾನುಭವಿಯಲ್ಲ. ರಾಜ್ಯದ ಮೂಲೆ ಮೂಲೆಗಳಲ್ಲಿ ಪ್ರವಾಸ ಮಾಡುವೆ ಎಂದಿದ್ದಾರೆ.

ಜೆಡಿಎಸ್ ಪಕ್ಷವನ್ನು ಅಳಿಸಿಹಾಕಲು ಸಂಚು ನಡೆಸಲಾಗುತ್ತಿದೆ. ಆದರೆ ಇದು ಎಂದಿಗೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಸಮಾವೇಶದಲ್ಲಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಜೀಂ, ಜಮೀರ್ ಅಹ್ಮದ್ ಗೈರಾಗಿದ್ದಕ್ಕೇ ಗೌಡರು ಅಸಮಾಧಾನ ವ್ಯಕ್ತಪಡಿಸಿದರು.

ಏತನ್ಮಧ್ಯೆ ನಾರಾಯಣ್ ರಾವ್ ಅವರನ್ನು ಹಂಗಾಮಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಯಿತು. ನಾರಾಯಣ್ ರಾವ್ ಹಂಗಾಮಿ ರಾಜ್ಯಾದ್ಯಕ್ಷರಷ್ಟೇ. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಮಾತುಕತೆ ನಡೆಸಿದ ಬಳಿಕ ಹೊಸ ರಾಜ್ಯಾಧ್ಯಕ್ಷರನ್ನು ನೇಮಕ ಮಾಡುತ್ತೇನೆ ಎಂದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement