ಕೆಪಿಎಸ್ಸಿ: ನೊಂದ ಅಭ್ಯರ್ಥಿಗಳಿಂದ ಬೃಹತ್ ಪ್ರತಿಭಟನಾ ರ್ಯಾಲಿ
ಕೆಪಿಎಸ್ ನೇಮಕಾತಿ ರದ್ದತಿ ಖಂಡಿಸಿ ನಗರದ ಫ್ರೀಡಂ..
ಬೆಂಗಳೂರು: ಕೆಪಿಎಸ್ ನೇಮಕಾತಿ ರದ್ದತಿ ಖಂಡಿಸಿ ನಗರದ ಫ್ರೀಡಂ ಪಾರ್ಕ್ನಲ್ಲಿ ಕಳೆದ 33 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಅಭ್ಯರ್ಥಿಗಳು ಬುಧವಾರ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದಾರೆ.
2011ರ ಕೆಪಿಎಸ್ಸಿ ನೇಮಕಾತಿಯನ್ನು ರದ್ದುಗೊಳಿಸದ ಸರ್ಕಾರದ ಕ್ರಮವನ್ನು ಖಂಡಿಸಿ ನೊಂದ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ಪ್ರತಿಭಟನೆಗೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬರದಿರುವುದರಿಂದ, ಇಂದು ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ರ್ಯಾಲಿ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಬೃಹತ್ ರ್ಯಾಲಿ ನಡೆಯಲಿದ್ದು, ಸಮಾವೇಶದ ನಂತರ ವಿಧಾನಸೌಧದ ಮುತ್ತಿಗೆ ಹಾಕಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲಿ ವಿಧಾನಸೌಧದ 1 ಕಿ.ಮೀ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಯಾಗಿದೆ.