ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಕಂಬಾಲಪಲ್ಲಿ ನರಮೇಧ: ಹೈಕೋರ್ಟ್ ನಿಂದ 32 ಆರೋಪಿಗಳ ಖುಲಾಸೆ

Vishwanath S
Updated On : 21 Aug 2014, 6:19 am

ಬೆಂಗಳೂರು: 2000ದ ಮಾರ್ಚ್ 11ರಂದು ನಡೆದಿದ್ದ ಕಂಬಾಲಪಲ್ಲಿಯ ದಲಿತರ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯ ನೀಡಿದ್ದ ತೀರ್ಪುನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, 32 ಆರೋಪಿಗಳನ್ನು ಖುಲಾಸೆ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸೆಷನ್ಸ್ ಕೋರ್ಟ್ 32 ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿತ್ತು. ಇಂದು ತೀರ್ಪು ನೀಡಿದ ಹೈಕೋರ್ಟ್‌ನ ನ್ಯಾಯಾಧೀಶರಾದ ಮೋಹನ್ ಶಾಂತನಗೌಡರ್ ನೇತೃತ್ವದ ಪೀಠ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿ, ಕೆಳ ಹಂತದ ನ್ಯಾಯಾಲಯ ನೀಡಿದ್ದ ತೀರ್ಪುನ್ನೇ ಎತ್ತಿ ಹಿಡಿದಿದೆ.

ಆರೋಪಿಗಳನ್ನು ಖುಲಾಸೆ ಮಾಡಿರುವುದರಿಂದ ಸರ್ಕಾರ ಈ ಆದೇಶವನ್ನು ಪ್ರಶ್ನಿಸಿ, ಪುನರ್ಪರಿಶೀಲನಾ ಅರ್ಜಿ ಹಾಕಬಹುದು ಅಥವಾ ನೇರವಾಗಿ ಸುಪ್ರೀಂಕೋರ್ಟ್‌ಗೆ ಹೋಗುವ ಸಾಧ್ಯತೆಯಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement