ಯು.ಆರ್. ಅನಂತ್ಮೂರ್ತಿ ತೀವ್ರ ಅಸ್ವಸ್ಥ; ಐಸಿಯುಗೆ ದಾಖಲು
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಯು.ಆರ್. ಅನಂತ್ಮೂರ್ತಿಯವರ ಆರೋಗ್ಯದಲ್ಲಿ ಏರುಪೇರಾಗಿದ್ದು...
ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಯು.ಆರ್. ಅನಂತ್ಮೂರ್ತಿಯವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ 2 ವರ್ಷದಿಂದ ಅನಂತಮೂರ್ತಿ ಅವರು ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿವೆ.