ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಕೆಪಿಎಸ್‌ಸಿ ಆಯ್ಕೆಪಟ್ಟಿ: ಸರ್ಕಾರದಿಂದ ಕೇವಿಯಟ್

Lingaraj Badiger
Updated On : 23 Aug 2014, 12:17 pm

ಬೆಂಗಳೂರು: ಕೆಪಿಎಸ್‌ಸಿ 2011ನೇ ಸಾಲಿನ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕರ್ನಾಟಕ ಆಡಳಿತಾತ್ಮಕ ನ್ಯಾಯಾಲಯದಲ್ಲಿ ಕೇವಿಯಟ್ ಸಲ್ಲಿಸಿದೆ.

ಕೆಪಿಎಸ್‌ಸಿ ಆಯ್ಕೆ ಪಟ್ಟಿ ಪ್ರಕಟಿಸಿದ ಮೇಲೆ ರಾಜ್ಯ ಸರ್ಕಾರ ಅಧಿಸೂಚನೆ ರದ್ದುಪಡಿಸಿದೆ. ಇದನ್ನು ಪ್ರಶ್ನಿಸಿ ಕೆಲವರು ಕೆಎಟಿ ಮೊರೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಅಭ್ಯರ್ಥಿಗಳು ಸರ್ಕಾರದ ನಿರ್ಧಾರ ಪ್ರಶ್ನಿಸುವುದನ್ನು ತಡೆವ ಸಲುವಾಗಿ ಕೇವಿಯಟ್ ಸಲ್ಲಿಸಿದೆ.

ಹಿನ್ನೆಲೆ: ಕೆಪಿಎಸ್‌ಸಿ 2011ರ ಸಾಲಿನಲ್ಲಿ ಆಯ್ಕೆಯಾಗಿದ್ದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿತ್ತು. ಸಂದರ್ಶನದ ಸಂದರ್ಭದಲ್ಲಿ ಅಕ್ರಮದ ಆರೋಪಗಳು ಕೇಳಿ ಬಂದಿದ್ದರಿಂದ ಸರ್ಕಾರವೇ ತನಿಖೆ ನಡೆಸುವಂತೆ ಕೋರಿ ವಿಧಾನಸೌಧ ಪೊಲೀಸ್ ಠಾಣೆಗೆ ನೊಂದ ಅಭ್ಯರ್ಥಿಗಳು ದೂರು ಸಲ್ಲಿಸಿದ್ದರು. ತದನಂತರ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿತ್ತು. ಸಿಐಡಿ ಕೂಡ ಅಕ್ರಮ ನಡೆದಿರುವ ಬಗ್ಗೆ ವರದಿ ಸಲ್ಲಿಸಿದ್ದರಿಂದ ಇತ್ತೀಚಿಗೆ ರಾಜ್ಯ ಸರ್ಕಾರವು ಅಧಿಸೂಚನೆಯನ್ನೇ ರದ್ದುಪಡಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement