3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ: ಪರಮೇಶ್ವರ್
ರಾಜ್ಯದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸೋಮವಾರ...
ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸೋಮವಾರ ಹೇಳಿದ್ದಾರೆ.
ಉಪಚುನಾಣೆಯಲ್ಲಿ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಗೆಲವು ಸಾಧಿಸಿದ ಹಿನ್ನಲೆಯಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ ಪರಮೇಶ್ವರ್, ರಾಜ್ಯದ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಿಜೆಪಿಗೆ ತಕ್ಕ ಪೈಪೋಟಿ ನೀಡಿದೆ ಎಂದು ತಿಳಿಸಿದ್ದಾರೆ.
ಚುನಾವಣೆಯಲ್ಲಿ ನಮ್ಮ ಗೆಲ್ಲಿಸಿದ 3 ಕ್ಷೇತ್ರದ ಮತದಾರರಿಗೆ ಅಭಿನಂದನೆ ಎಂದ ಅವರು, 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಉತ್ತಮ ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶಾಂತವೀರಪ್ಪಗೌಡ ಅವರು ಕೇವಲ 6 ಸಾವಿರ ಮತಗಳಿಂದ ಸೋಲು ಕಂಡಿದ್ದಾರೆ. ಹಾಗಾಗಿ, ಬಿ.ವೈ ರಾಘವೇಂದ್ರ ಅವರಿಗೆ ಸರಿಯಾದ ಪೈಪೋಟಿ ನೀಡಿದ್ದಾರೆ ಎಂದು ಪರಮೇಶ್ವರ್ ಹೇಳಿದರು.
ಬಿಜೆಪಿ ಭದ್ರಕೋಟೆ ಎಂದೇ ಬಿಂಬಿತವಾಗಿದ್ದ ಬಳ್ಳಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯ ಸಾಧಿಸಿರುವುದು ಸಂತಸ ತಂದಿದೆ. ಕಾಂಗ್ರೆಸ್ ಅಭ್ಯರ್ಥಿ ಭಾರಿ ಮತಗಳ ಅಂತದಿಂದ ಜಯ ಸಾಧಿಸಿದ್ದಾರೆ.
ಕಾಂಗ್ರೆಸ್ ಮೇಲೆ ಭರವಸೆ ಇಟ್ಟು ಮತದಾರರು ನಮ್ಮನ್ನು ಗೆಲ್ಲಿಸಿದ್ದಾರೆ ಎಂದ ಅವರು, ಮತದಾರರು ನಿರೀಕ್ಷಿಸಿರುವ ಉತ್ತಮ ಆಡಳಿತ ನೀಡುತ್ತೇವೆ ಎಂದಿದ್ದಾರೆ.
ಏಳು ದಿನವೂ ಚುನಾವಣೆಯ ಪ್ರವಾಸ ಕೈಗೊಂಡ ಸಿಎಂ ಸಿದ್ದರಾಮಯ್ಯ ಅವರ ಜನಪರ ಕಾರ್ಯಕ್ರಮಗಳು ಗೆಲುವಿಗೆ ಮುಖ್ಯಕಾರಣ. ಕಾಂಗ್ರೆಸ್ ಪ್ರಣಾಳಿಕೆ ನೀಡಿರುವ ಭರವಸೆಗಳನ್ನು ಇನ್ನು 5 ವರ್ಷಗಳಲ್ಲಿ ಪೂರೈಸುತ್ತೇವೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.