ಡಿವಿಎಸ್ ಪುತ್ರನ ವಂಚನೆ ಪ್ರಕರಣ: ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಧರಣಿ
ಕೇಂದ್ರ ರೈಲ್ವೇ ಸಚಿವ ಡಿ.ವಿ ಸದಾನಂದಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರ ಮೇಲೆ...
ಬೆಂಗಳೂರು: ಕೇಂದ್ರ ರೈಲ್ವೇ ಸಚಿವ ಡಿ.ವಿ ಸದಾನಂದಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರ ಮೇಲೆ ವಂಚನೆ ಪ್ರಕರಣ ದಾಖಲಾದ ಬೆನ್ನಲ್ಲೇ ನಗರದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಧರಣಿ ಕೈಗೊಂಡಿದ್ದಾರೆ.
ಬೆಂಗಳೂರಿನ ಮೌರ್ಯ ಸರ್ಕಲ್ನ ಗಾಂಧಿ ಪ್ರತಿಮೆ ಬಳಿ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಡಿವಿಎಸ್ ಪುತ್ರ ಮಹಿಳೆಗೆ ವಂಚನೆ ಮಾಡಿದ್ದು, ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಉನ್ನತಮಟ್ಟದಲ್ಲಿರುವವರ ಮಗನೇ ವಂಚನೆ ಮಾಡಿರುವುದು ಖಂಡನೀಯ. ತಮ್ಮ ಮಗ ಮಾಡಿರುವ ವಂಚನೆಗೆ ನೇರ ಹೊಣೆಗಾರರಾಗಿ ಡಿ.ವಿ ಸದಾನಂದಗೌಡ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕಾರ್ತಿಕ್ ಗೌಡ ವಿರುದ್ಧ ಅತ್ಯಾಚಾರ, ಅಪಹರಣ ಹಾಗೂ ವಂಚನೆ ಆರೋಪದಡಿ ಆರ್ಟಿನಗರ ಪೊಲೀಸ್ ಠಾಣೆಯಲ್ಲಿ ನಟಿ ಮೈತ್ರಿಯಾ ಗೌಡ ದೂರು ದಾಖಲಿಸಿದ್ದರು.