ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ರಸಗೊಬ್ಬರ ಸಮಸ್ಯೆ ಬಗೆಹರಿಸದಿದ್ದರೆ ಪ್ರತಿಭಟನೆ: ದತ್ತ ಎಚ್ಚರಿಕೆ

ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ ತೀವ್ರವಾಗಿ ಕಾಡುತ್ತಿದ್ದರೂ ಕೃಷಿ ಇಲಾಖೆ ಮಾತ್ರ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿದೆ ಎಂದು...

Mainashree
Updated On : 28 Aug 2014, 9:16 am

ಬೆಂಗಳೂರು: ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ ತೀವ್ರವಾಗಿ ಕಾಡುತ್ತಿದ್ದರೂ ಕೃಷಿ ಇಲಾಖೆ ಮಾತ್ರ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ವೈ.ಎಸ್.ವಿ ದತ್ತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿರುವ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಸಗೊಬ್ಬರ ಸಮಸ್ಯೆ ನಿವಾರಿಸುವುದಕ್ಕೆ ಸರ್ಕಾರ ಸೆಪ್ಟೆಂಬರ್ 1ರೊಳಗೆ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದರೆ ಸೆ.2ರಂದು ಕೃಷಿ ಸಚಿವರ ಕಚೇರಿ ಎದುರು ಪ್ರತಿಭಟನೆ ನಡೆಸುತ್ತೇನೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಮಳೆ ತಡವಾಗಿ ಆರಂಭವಾಗಿದೆ. ಹೀಗಾಗಿ ರಸಗೊಬ್ಬರ ಸಮಸ್ಯೆ ಉಂಟಾಗುತ್ತದೆ ಎಂದು ಮೊದಲೇ ನಿರೀಕ್ಷಿಸಲಾಗಿತ್ತು. ಆದರೆ ರಾಜ್ಯ ಸರ್ಕಾರ ಸಾಕಷ್ಟು ಪ್ರಮಾಣದಲ್ಲಿ ರಸಗೊಬ್ಬರದ ಕಾಪು ದಾಸ್ತಾನು ಹೊಂದಿರಲಿಲ್ಲ. 1.85 ಲಕ್ಷ ಮೆಟ್ರಿಕ್ ಟನ್ ಕಾಪು ದಾಸ್ತಾನು ಅಗತ್ಯವಿತ್ತು. ಆದರೆ ಸರ್ಕಾರಿ ಸ್ವಾಮ್ಯದ ರಸಗೊಬ್ಬರ ಮಾರಾಟ ಮಹಾಮಂಡಳದ ಬಳಿ ಕೇವಲ 35 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ಮಾತ್ರ ಇದೆ. ಹಿಂದೆ ಈ ಮಹಾಮಂಡಲದ ನಿರ್ದೇಶಕರಾಗಿದ್ದ ಷಡಕ್ಷರಸ್ವಾಮಿ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಲು ಕ್ರಮ ತೆಗೆದುಕೊಂಡಿರಲಿಲ್ಲ ಎಂದು ಆರೋಪಿಸಿದರು.

ಆದರೆ ಈ ವಿಚಾರದಲ್ಲಿ ರೈತ ಸಂಘಟನೆಗಳು ಏಕೆ ಸುಮ್ಮನಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದಲ್ಲಿ ರೈತ ಹೋರಾಟ ಸತ್ತು ಎಷ್ಟೋ ದಿನಗಳಾಗಿವೆ. ಪ್ರೊ.ನಂಜುಂಡಸ್ವಾಮಿ ಅವರು ಬದುಕಿದ್ದಾಗ ಈ ಹೋರಾಟಕ್ಕೆ ಜೀವ ಇತ್ತು. ರಾಜಕಾರಣಿಗಳೂ ರೈತ ಸಂಘಟನೆಗಳನ್ನು ವಿಘಟಿಸುತ್ತಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement