ಮೈತ್ರಿಯಾ ವಿವಾ(ಹ)ದ: ಜಾಮೀನು ಮೊರೆ ಹೋದ ಕಾರ್ತಿಕ್ ಗೌಡ
ಅತ್ಯಾಚಾರ, ಅಪಹರಣ ಹಾಗೂ ವಂಚನೆ ಆರೋಪ ಎದುರಿಸುತ್ತಿರುವ ಕೇಂದ್ರ ರೇಲ್ವೆ ಸಚಿವ ಡಿ.ವಿ.ಸದಾನಂದಗೌಡ...
ಬೆಂಗಳೂರು: ಅತ್ಯಾಚಾರ, ಅಪಹರಣ ಹಾಗೂ ವಂಚನೆ ಆರೋಪ ಎದುರಿಸುತ್ತಿರುವ ಕೇಂದ್ರ ರೇಲ್ವೆ ಸಚಿವ ಡಿ.ವಿ.ಸದಾನಂದಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರು ಶನಿವಾರ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಕಾರ್ತಿಕ್ ಗೌಡ ತನ್ನನ್ನು ಅಪಹರಿಸಿ, ಅತ್ಯಾಚಾರ ಮಾಡಿ ಬಳಿಕ ಮದುವೆ ಮಾಡಿಕೊಳ್ಳುವುದಾಗಿ ಹೇಳಿ ವಂಚಿಸಿದ್ದಾರೆ ಎಂದು ಆರೋಪಿಸಿ ನಟಿ ಮೈತ್ರಿಯಾ ಗೌಡ ಅವರು ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರು ಹಿನ್ನೆಲೆಯಲ್ಲಿ ಇಂದು ಕಾರ್ತಿಕ್ ಗೌಡ ಬೆಂಗಳೂರಿನ ಸೆಷನ್ಸ್ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ನಟಿ ಮೈತ್ರಿಯಾ ಗೌಡ ಅವರ ಆರೋಪದ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಆರ್.ಟಿ.ನಗರ ಪೊಲೀಸರು ಈಗಾಗಲೇ ತನಿಖೆಯನ್ನು ಚುರುಕುಗೊಳಿಸಿದ್ದು, ಪ್ರಕರಣ ಸಂಬಂಧ ಕಾರ್ತಿಕ್ ಗೌಡ ಅವರಿಗೆ ನೋಟಿಸ್ ಕೂಡ ನೀಡಿದ್ದಾರೆ. ಯಾವುದೇ ಕ್ಷಣದಲ್ಲೂ ಬೇಕಾದರು ಪೊಲೀಸರು ಅವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಬಹುದು.