ಅತಿವೃಷ್ಟಿ ಪರಿಹಾರಕ್ಕೆ ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಿಎಂ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಸಂಕಷ್ಟಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಎಲ್ಲ ಜಿಲ್ಲಾಧಿಕಾರಿ...
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಸಂಕಷ್ಟಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಯಾದಗಿರಿ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಅತಿವೃಷ್ಟಿಯುಂಟಾಗಿದೆ. ಪರಿಹಾರಕ್ಕಾಗಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿ ಮತ್ತು ಉಸ್ತುವಾರಿ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ವಿಡಿಯೊ ಕಾನ್ಫೆರೆನ್ಸ್ ಮೂಲಕವೂ ಜಿಲ್ಲಾಡಳಿತದೊಂದಿಗೆ ಚರ್ಚಿಸಲಾಗುತ್ತದೆ. ಅತಿವೃಷ್ಟಿಯಿಂದ ಎಷ್ಟು ಹಾನಿಯಾಗಿದೆ ಎಂಬ ಪೂರ್ಣ ಮಾಹಿತಿ ಲಭ್ಯವಾಗಿಲ್ಲ. ಪೂರ್ಣ ವರದಿ ದೊರೆತ ನಂತರ ಕೇಂದ್ರಕ್ಕೆ ನೆರವು ಕೋರಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು.
ದೆಹಲಿಗೆ ಸಿಎಂ: ಸಚಿವ ಸಂಪುಟ ವಿಸ್ತರಣೆಗಾಗಿ ಹೈಕಮಾಂಡ್ ಒಪ್ಪಿಗೆ ಪಡೆಯಲು ಸೆ.3ರಂದು ದೆಹಲಿಗೆ ತೆರಳಿದ್ದೇನೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಹೇಳಿದರು. ಮಂತ್ರಿಮಂಡಲ ವಿಸ್ತರಣೆ, ನಿಗಮ ಮಂಡಳಿಗಳಿಗೆ ನೇಮಕ ಕುರಿತಂತೆ ಹೈಕಮಾಂಡ್ ಜತೆ ಚರ್ಚಿಸಲಾಗುವುದು ಎಂದರು.
ಲೋಕಸಭೆ, ರಾಜ್ಯಸಭೆಯ ಕಲಾಪಗಳನ್ನು ಬಿತ್ತರಿಸುವ ವಾಹಿನಿಯ ಮಾದರಿಯಲ್ಲೇ ವಿಧಾನಸೌಧದಲ್ಲಿ ನಡೆಯುವ ಕಲಾಪಗಳನ್ನು ಬಿತ್ತರಿಸಲು ವಾಹಿನಿ ಪ್ರಾರಂಭಿಸಬೇಕೆಂಬ ಪ್ರಸ್ತಾವನೆ ಇದೆ. ಈ ಕುರಿತು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಕೆಪಿಎಸ್ಸಿ ವಿಚಾರದಲ್ಲಿ ಕೆಎಟಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿದೆ. ಆದೇಶ ತೆರವುಗೊಳಿಸಲು ಸಾಧ್ಯ ಇರವ ಕ್ರಮಗಳನ್ನು ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು. ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.