ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಆತ್ಮಹತ್ಯೆಗೆ ಯತ್ನಿಸಿದ್ದ ಶ್ಯಾಮಶಾಸ್ತ್ರಿ ಸಾವು

Vishwanath S
Updated On : 31 Aug 2014, 7:20 am

ಪುತ್ತೂರು: ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ಬ್ಲಾಕ್‌ ಮೇಲ್ ಪ್ರಕರಣದ ಆರೋಪಿ ದಿವಾಕರ ಶಾಸ್ತ್ರಿ ಅವರ ಸಹೋದರ ಶ್ಯಾಮ ಶಾಸ್ತ್ರಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪೂತ್ತೂರಿನ ಕೆದಿಲ ನಿವಾಸಿಯಾಗಿರುವ ಶ್ಯಾಮ ಅವರಿಗೆ ಬೆದರಿಕೆ ಕರೆಗಳು ಬಂದಿದ್ದವು. ಅಲ್ಲದೆ ನಾಳೆ ಶ್ರೀಗಳ ಭಕ್ತರು ಶ್ಯಾಮ ಮನೆಯ ಎದುರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದರು. ಇದರಿಂದಾಗಿ ಮನನೊಂದು ಭಾನುವಾರ ಮಧ್ಯಾಹ್ನ ಮನೆಯಲ್ಲಿದ್ದ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. 

ಗಂಭೀರವಾಗಿ ಗಾಯಗೊಂಡಿರುವ ಶ್ಯಾಮ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಸಂಜೆ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement