ತನ್ನ ಪೋಷಕರಿಗೆ ಬಾಲಕಿ ಮೊನಿಷಾ ಬರೆದಿರುವ ಪತ್ರ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

'ಅಮ್ಮ ಐ ಲವ್ ಯು' ಡೆತ್‌ನೋಟ್‌ನಲ್ಲಿ ಬಾಲಕಿ ಹೇಳಿಕೆ

4ನೇ ತರಗತಿಯ 10 ವರ್ಷದ ಬಾಲಕಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೂ ಮುನ್ನ ಪೋಷಕರಿಗೆ ಪತ್ರವೊಂದನ್ನು ಬರೆದಿದ್ದಾಳೆ.

ಬೆಂಗಳೂರು: 4ನೇ ತರಗತಿಯ 10 ವರ್ಷದ ಬಾಲಕಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೂ ಮುನ್ನ ಪೋಷಕರಿಗೆ ಪತ್ರವೊಂದನ್ನು ಬರೆದಿದ್ದಾಳೆ.

ಬೆಂಗಳೂರಿನ ಯಲಂಹಕದ ನ್ಯೂಟೌನ್ ಪ್ರದೇಶದ ಮನೆಯೊಂದರಲ್ಲಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಬಾಲಕಿಯ ಹೆಸರು ಮೊನಿಷಾ ಎಂದು ತಿಳಿದುಬಂದಿದೆ. ಬಾಲಕಿ ಮೊನಿಷಾ ಸನ್‌ಶೈನ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಳೆದ ಒಂದು ವಾರದಿಂದ ಶಾಲೆಗೆ ಹೋಗಿರಲಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪೋಷಕರು ಮೊನಿಷಾಳಿಗೆ ಬೈದಿದ್ದರು. ಇದರಿಂದ ಮನನೊಂದ ಬಾಲಕಿ ಮೊನಿಷಾ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿಕೊಂಡು ಸೋಮವಾರ ರಾತ್ರಿ ಬೆಂಕಿ ಹಚ್ಚಿಕೊಂಡಿದ್ದಾಳೆ.

ಸೋಮವಾರ ತಡರಾತ್ರಿಯಲ್ಲಿಯೇ ಬಾಲಕಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಇಂದು ಬಾಲಕಿ ಮೊನಿಷಾ ಮೃತಪಟ್ಟಿದ್ದಾಳೆ. ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಒಂದನ್ನು ಬರೆದಿರುವ ಬಾಲಕಿ ಮೊನಿಷಾ, ಪತ್ರದಲ್ಲಿ 'ಅಮ್ಮ ನಾನು ನಿನ್ನ ಹತ್ತಿರ ಸುಳ್ಳು ಹೇಳಿದ್ದೇನೆ. ನಾನು ಒಂದು ವಾರದಿಂದ ಶಾಲೆಗೆ ಹೋಗಿರಲಿಲ್ಲ. ನನ್ನು ಕ್ಷಮಿಸು, ನಿನ್ನ ಬಿಟ್ಟು ಹೋಗುತ್ತಿದ್ದೇನೆ. ಆದರೆ ನಾನು ಸತ್ತರೂ ನಿನ್ನ ಜೊತೆಗೇ ಇರುತ್ತೇನೆ. ಐ ಲವ್ ಯು ಅಮ್ಮ' ಎಂದು ಬಾಲಕಿ ಬರೆದಿದ್ದಾಳೆ.

ಬಾಲಕಿ ಸಾವಿನಿಂದಾಗಿ ಪೋಷಕರು ಆಘಾತಕ್ಕೊಳಗಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಯಲಹಂಕ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಸ್ತುತ ಬಾಲಕಿ ಶವವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಹೆಚ್ಚುವರಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಅವರು, ಪತ್ರದಲ್ಲಿ ಬಾಲಕಿ ಯಾರನ್ನೂ ದೂಷಿಸಿಲ್ಲ. ಶಾಲೆಯ ಕುರಿತಾಗಲಿ ಅಥವಾ ಪೋಷಕರ ಕುರಿತಾಗಲಿ ಬಾಲಕಿ ಏನನ್ನೂ ಬರೆದಿಲ್ಲ. ಆದರೂ ಪ್ರಕರಣದ ಕುರಿತು ಕೂಲಂಕುಷ ತನಿಖೆ ನಡೆಸುವುದಾಗಿ ಹೇಳಿದರು.

ಒಟ್ಟಾರೆ ಪೋಷಕರು ಬೈದರು ಎಂದ ಮಾತ್ರಕ್ಕೇ ಅಮೂಲ್ಯ ಜೀವ ಕಳೆದುಕೊಂಡ ಬಾಲಕಿ ಮೊನಿಷಾ ಪ್ರಕರಣ ನಿಜಕ್ಕೂ ವಿಷಾಧನೀಯ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ