ರಾಮಕಥಾ ಗಾಯಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ರಾಘವೇಶ್ವರ ಶ್ರೀ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ವೈದ್ಯಕೀಯ ಪರೀಕ್ಷೆಗೆ ರಾಘವೇಶ್ವರ ಭಾರತಿ ಶ್ರೀ ಗೈರು

ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಿಐಡಿ ಅಧಿಕಾರಿಗಳು ಆಯೋಜಿಸಿದ್ದ ವೈದ್ಯಕೀಯ ಪರೀಕ್ಷೆಗೆ ರಾಘವೇಶ್ವರ ಭಾರತೀ ಶ್ರೀಗಳು ಗೈರು ಹಾಜರಾಗಿದ್ದಾರೆ.

ಬೆಂಗಳೂರು: ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಿಐಡಿ ಅಧಿಕಾರಿಗಳು ಆಯೋಜಿಸಿದ್ದ ವೈದ್ಯಕೀಯ ಪರೀಕ್ಷೆಗೆ ರಾಘವೇಶ್ವರ ಭಾರತೀ ಶ್ರೀಗಳು ಗೈರು ಹಾಜರಾಗಿದ್ದಾರೆ.

ರಾಮಕಥಾ ಕಲಾವಿದೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್, ಶ್ರೀಗಳ ವೈದ್ಯಕೀಯ ಪರೀಕ್ಷೆಗೆ ಅನುಮತಿ ನೀಡಿತ್ತು. ಈ ಹಿನ್ನಲೆಯಲ್ಲಿ ಸಿಐಡಿ ಅಧಿಕಾರಿಗಳು ರಾಘವೇಶ್ವರ ಭಾರತೀ ಶ್ರೀಗಳಿಗೆ ನಿನ್ನೆಯೇ ನೋಟಿಸ್ ನೀಡಿ ವೈದ್ಯಕೀಯ ಪರೀಕ್ಷೆಗೆ ಹಾಜರಾಗಬೇಕು ಎಂದು ಸೂಚಿಸಿದ್ದರು. ಅಲ್ಲದೆ ಇಂದು ಬೆಳಗ್ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶ್ರೀಗಳ ವೈದ್ಯಕೀಯ ಪರೀಕ್ಷೆಗೆ ಸಕಲ ಸಿದ್ಧತೆಯನ್ನು ಮಾಡಲಾಗಿತ್ತು.

ಆದರೆ ಪರೀಕ್ಷೆಗೆ ರಾಘವೇಶ್ವರ ಶ್ರೀಗಳು ಮಾತ್ರ ಹಾಜರಾಗಲೇ ಇಲ್ಲ. ನಿನ್ನೆ ಸಿಐಡಿ ಅಧಿಕಾರಿಗಳ ನೋಟಿಸ್ ತಲುಪುತಿದ್ದಂತೆಯೇ ಪರೀಕ್ಷೆಗೆ ಶ್ರೀಗಳು ಒಂದು ವಾರದ ಗಡುವಿಗಾಗಿ ಮನವಿ ಮಾಡಿದ್ದರು. ಆದರೆ ಶ್ರೀಗಳ ಮನವಿಯನ್ನು ತಿರಸ್ಕರಿಸಿದ್ದ ಅಧಿಕಾರಿಗಳು, ವೈದ್ಯಕೀಯ ಪರೀಕ್ಷೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ ಶ್ರೀಗಳು ಇಂದು ಪರೀಕ್ಷೆಗೆ ಹಾಜರಾಗಲಿಲ್ಲ.

ಈ ಹಿನ್ನಲೆಯಲ್ಲಿ ಮತ್ತೆ ಕೋರ್ಟ್ ಮೊರೆ ಹೋಗಲು ನಿರ್ಧರಿಸಿರುವ ಸಿಐಡಿ ಅಧಿಕಾರಿಗಳು, ರಾಘವೇಶ್ವರ ಶ್ರೀಗಳು ಜಾಮೀನು ನೀಡಿಕೆಯಲ್ಲಿನ ಷರತ್ತುಗಳನ್ನು ಉಲ್ಲಂಘಿಸಿದ್ದು, ತನಿಖೆಗೆ ಶ್ರೀಗಳು ಸಹಕರಿಸುತ್ತಿಲ್ಲ ಎಂದು ಆರೋಪಿಸಿ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!