ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ರಾಘವೇಶ್ವರ ಶ್ರೀಗಳ ವೈದ್ಯಕೀಯ ಪರೀಕ್ಷೆ ಮುಕ್ತಾಯ

Vishwanath S
Updated On : 5 Dec 2014, 1:36 am

ಬೆಂಗಳೂರು: ರಾಮಕಥಾ ಗಾಯಕಿ ಪ್ರೇಮಲತಾ ಅವರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿರುವ ರಾಘವೇಶ್ವರ ಶ್ರೀಗಳ ವೈದ್ಯಕೀಯ ಪರೀಕ್ಷೆ ಮುಕ್ತಾಯವಾಗಿದೆ. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸತತ 5 ಗಂಟೆಗಳ ಕಾಲ ಪರೀಕ್ಷೆ ನಡೆಯಿತು.

ರಾಘವೇಶ್ವರರ ರಕ್ತ ಪರೀಕ್ಷೆ, ಮೂತ್ರ, ವೀರ್ಯಾಣು ಪರೀಕ್ಷೆ, ದೈಹಿಕ ಸದೃಢತೆ ಬಗ್ಗೆಯೂ ವೈದ್ಯರ ತಂಡ ಪರೀಕ್ಷೆ ನಡೆಸಿದೆ. ವಿಕ್ಟೋರಿಯಾ ಆಸ್ಪತ್ರೆಯ ಅಧೀಕ್ಷಕ ಡಾ. ದುರ್ಗಣ್ಣ, ನೆಪ್ರೊ ಯುರಾಲಜಿ ಮುಖ್ಯಸ್ಥ ಡಾ. ಕೇಶವಮೂರ್ತಿ, ಡಾ.ವೆಂಕಟೇಶ್​ಮೂರ್ತಿ ಸೇರಿ ಐವರು ವೈದ್ಯರಿಂದ ಪರೀಕ್ಷೆ ನಡೆಸಲಾಯ್ತು. ತನಿಖಾಧಿಕಾರಿ ಸಿರಿಗೌರಿ ಸಹ ಈ ಸಂದರ್ಭ ಉಪಸ್ಥಿತರಿದ್ದರು.

ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ನಿನ್ನ ಸಿಐಡಿ ನೋಟಿಸ್ ನೀಡಿದ್ದರೂ ಶ್ರೀಗಳು ಪರೀಕ್ಷೆಗೆ ಹಾಜರಾಗಿರಲಿಲ್ಲ. ಇಂದು ಬೆಳಗ್ಗೆಯೇ ಪರೀಕ್ಷೆಗೆ ಹಾಜರಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement