ಅತ್ಯಾಚಾರ ಗೈದ ದೂರ್ತ ತಂದೆಯ ಬಂಧನ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ತಂದೆಯಿಂದಲೇ ಮಕ್ಕಳ ಮೇಲೆ ಅತ್ಯಾಚಾರ..!

ದೂರ್ತ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳ ಮೇಲೆ ನಿರಂತರ ಅತ್ಯಾಚಾರ ಮಾಡಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೆಳ್ತಂಗಡಿ: ದೂರ್ತ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳ ಮೇಲೆ ನಿರಂತರ ಅತ್ಯಾಚಾರ ಮಾಡಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೆಳ್ತಂಗಡಿಯ ನೇತ್ರಾವತಿ ಸ್ನಾನಘಟ್ಟದ ಸಮೀಪದ ನಿವಾಸಿ ರಾಜ ಎಂಬಾತ ತನ್ನ ಮಲಮಗಳು ಸೇರಿದಂತೆ 10 ವರ್ಷದ ತನ್ನದೇ ಮಗಳ ಮೇಲೆ ತನ್ನ ಕಾಮತೃಷೆ ತೀರಿಸಿಕೊಂಡಿದ್ದಾನೆ. ಈತನ ಕಾಟವನ್ನು ತಾಳಲಾರದೆ ಅತ್ಯಾಚಾರಕ್ಕೆ ಗುರಿಯಾದ ಹೆಣ್ಣು ಮಕ್ಕಳೇ ಈತನನ್ನು ಪೊಲೀಸರಿಗೆ ಒಪ್ಪಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆರೋಪಿ ರಾಜು ಮೂಲತಃ ಕೊಳ್ಳೆಗಾಲ ನಿವಾಸಿಯಾಗಿದ್ದು, ಈತ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು. ಈತನೊಂದಿಗೆ ಪತ್ನಿ, ಆಕೆಯ ಮೊದಲ ಗಂಡನ 14 ವರ್ಷದ ಮಗಳು ಮತ್ತು ಈತನ 10 ವರ್ಷದ ಮಗಳು ಒಟ್ಟಾಗಿ ವಾಸಿಸುತ್ತಿದ್ದರು. ಪತ್ನಿ ಕೆಲಸಕ್ಕೆಂದು ಹೊರಗೆ ಹೋದಾಗ ಈತ ತನ್ನ ಮಕ್ಕಳ ಮೇಲೆ ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಿದ್ದ. ಕಳೆದ 2 ವರ್ಷಗಳಿಂದ ಪತ್ನಿಯ ಮೊದಲ ಗಂಡನ ಮಗಳ ಮೇಲೆ ಮತ್ತು ಒಂದು ವರ್ಷದಿಂದ ತನ್ನ 10 ವರ್ಷದ ಮಗಳ ಮೇಲೆ ಅತ್ಯಾಚಾರ ಮಾಡುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈತನ ನಿರಂತರ ಕಾಟವನ್ನು ತಾಳಲಾಗದೇ ಇತ್ತೀಚೆಗೆ ದೌರ್ಜನ್ಯಕ್ಕೊಳಗಾದ ಈ ಇಬ್ಬರು ಹೆಣ್ಣುಮಕ್ಕಳು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ರಾಜನ ವಿರುದ್ಧ ಬೆಳ್ತಂಗಡಿ ಪೊಲೀಸರು ಅತ್ಯಾಚಾರ, ಬೆದರಿಕೆ ಹಾಗೂ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೆ ಅತ್ಯಾಚಾರಕ್ಕೊಳಗಾಗಿರುವ ಇಬ್ಬರು ಮಕ್ಕಳನ್ನು ವೈದ್ಯಕೀಯ ಪರೀಕ್ಷೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಪರೀಕ್ಷೆ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

ತಾಯಿಗೆ ತಿಳಿಸಿದ್ದರೂ ಪ್ರಯೋಜನವಾಗಲಿಲ್ಲ
ಇನ್ನು ತಮ್ಮ ಮೇಲಾಗುತ್ತಿರುವ ದೌರ್ಜನ್ಯದ ಕುರಿತು ಮಕ್ಕಳು ತಮ್ಮ ತಾಯಿಗೆ ಪರೋಕ್ಷವಾಗಿ ತಿಳಿಸಿದ್ದರೂ, ಗಂಡನ ಮೇಲಿನ ನಂಬಿಕೆಯಿಂದಾಗಿ ಆಕೆ ಅದನ್ನು ನಿರ್ಲಕ್ಷಿಸಿದ್ದಳು. ಅಲ್ಲದೆ ಆರೋಪಿ ರಾಜ ನಿಜಾಂಶ ಬಯಲು ಮಾಡಿದರೆ ಇಬ್ಬರನ್ನೂ ಕೊಂದುಹಾಕುವುದಾಗಿ ಬೆದರಿಕೆ ಹಾಕಿದ್ದ. ಹೀಗಾಗಿ ಮಕ್ಕಳು ಸತ್ಯವನ್ನೂ ಹೇಳಲಾಗದೇ, ನಿತ್ಯ ನರಕಯಾತನೆ ಅನುಭವಿಸುತ್ತಿದ್ದರು.

ಅಂತಿಮವಾಗಿ ದುಷ್ಟ ತಂದೆಯ ವಿರುದ್ಧ ಕಾನೂನು ಮೊರೆ ಹೋಗಲು ನಿರ್ಧರಿಸಿದ ಮಕ್ಕಳು ಬೆಳ್ತಂಗಡಿಯ ಹೊರಠಾಣೆ ಪೊಲೀಸರ ಬಳಿ ತಮ್ಮ ಕಣ್ಣೀರ ಕಥೆಯನ್ನು ಹೇಳಿಕೊಂಡಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿ ರಾಜನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!