ಜಿಲ್ಲಾ ಸುದ್ದಿ

ಕಳಪೆ ಕಾಮಗಾರಿ: ಆಯುಕ್ತರ ಹಾಜರಿಗೆ ಲೋಕಾ ಆದೇಶ

ಬಹುತೇಕ ಕಾಮಗಾರಿಗಳು ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಬೇಕೆಂದು...

ಬೆಂಗಳೂರು: ಕಳಪೆ ಕಾಮಗಾರಿ ಹಗರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಆಯುಕ್ತರೇ ಖುದ್ದು ಹಾಜರಾಗಿ ವರದಿ ಸಲ್ಲಿಸಬೇಕು ಎಂದು ಉಪ ಲೋಕಾಯುಕ್ತರು ಆದೇಶಿಸಿದ್ದಾರೆ.
ಆಷ್ಟೇ ಅಲ್ಲ, ಕಳೆದೊಂದು ವರ್ಷದಲ್ಲಿ ರಸ್ತೆಗಳ ಅಭಿವೃದ್ದಿಗೆ ರೂ.100 ಕೋಟಿ ವೆಚ್ಚ ಮಾಡಿರುವುದು ನಿಜವಾಗಿದ್ದರೆ ವಿವರಗಳನ್ನು ನೀಡಬೇಕು.

ಜತೆಗೆ ರಸ್ತೆ ಕಾಮಗಾರಿಗಳನ್ನು ಮಳೆಗಾಲದಲ್ಲೇ ಏಕೆ ಕೈಗೆತ್ತಿಕೊಳ್ಳಲಾಗುತ್ತಿದೆ ಎನ್ನುವ ಬಗ್ಗೆಯೂ ಮಾಹಿತಿ ನೀಡಬೇಕೆಂದು ಉಪ ಲೋಕಾಯುಕ್ತ ನ್ಯಾ.ಸುಭಾಷ್ ಅಡಿ ಸೂಚಿಸಿದ್ದಾರೆ.

ಬಿಬಿಎಂಪಿ ಕೈಗೊಂಡಿರುವ ಬಹುತೇಕ ಕಾಮಗಾರಿಗಳು ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಬೇಕೆಂದು ಕರ್ನಾಟಕ ಜನಹಿತ ವೇದಿಕೆ ನೀಡಿದ ದೂರಿನ ಅನ್ವಯ ಉಪ ಲೋಕಾಯುಕ್ತರು ಈ ಕ್ರಮ ಕೈಗೊಂಡಿದ್ದಾರೆ. ಜನಹಿತ ವೇದಿಕೆ ಅಧ್ಯಕ್ಷ ಸಾಯಿದತ್ತ, ಪಾಲಿಕೆ ಕಳೆದೊಂದು ವರ್ಷದಲ್ಲಿ ರಸ್ತೆ ನಿರ್ವಹಣೆಗೆಂದೇ ರೂ.1000 ಕೋಟಿ ವ್ಯಯಿಸಿರುವ ಬಗ್ಗೆಯೂ ಅನುಮಾನವಿದ್ದು, ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು.

ಬಿಬಿಎಂಪಿ 2014ರ ಏಪ್ರಿಲ್‌ನಿಂದ ಈ ವರೆಗೆ ಕೈಗೊಂಡಿರುವ ಎಲ್ಲ ಕಾಮಗಾರಿಗಳೂ ಬಹುತೇಕ ಕಳಪೆಯಾಗಿವೆ. ಬಿಬಿಎಂಪಿ ಗುಣಮಟ್ಟ ನಿಯಂತ್ರಣ ವಿಭಾಗದ ಅಧಿಕಾರಿಗಳು ನಡೆಸಿದ ಪರೀಕ್ಷೆ ವೇಳೆ 189 ಕಾಮಗಾರಿಗಳಲ್ಲಿ 171 ಕಾಮಗಾರಿಗಳು ಕಳೆಪೆಯಾಗಿರುವುದು ಪತ್ತೆಯಾಗಿತ್ತು. ಈ ಬಗ್ಗೆಯೂ ಅವರು ತನಿಖೆಗಾಗಿ ಮನವಿ ಸಲ್ಲಿಸಿದ್ದರು.

ಎರಡು ವಾರಗಳ ಹಿಂದೆ 'ಕನ್ನಡಪ್ರಭ' ಬಿಬಿಎಂಪಿಯಲ್ಲಿ ಕಳೆದುದೊಂದು ವರ್ಷದಲ್ಲಿ ರಸ್ತೆಗಳ ಅಭಿವೃದ್ಧಿಗೆ ರೂ.1000 ಕೋಟಿ ವ್ಯಯಿಸಿರುವ ಬಗ್ಗೆ ವರದಿಯೊಂದನ್ನು ಪ್ರಕಟಿಸಿತ್ತು. ಇದನ್ನಾಧರಿಸಿ ಜನಹಿತ ವೇದಿಕೆ ಅಧ್ಯಕ್ಷ ಸಾಯಿದತ್ತ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು