ಬೆಳಗಾವಿ; ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವರದಿಗಾಗಿ ತೆರಳಿದ್ದ ಟೈಮ್ಸ್ ಆಫ್ ಇಂಡಿಯಾ ದಿನಪತ್ರಿಕೆಯ ಸಹಾಯಕ ಸಂಪಾದಕ ಎನ್.ಡಿ. ಶಿವಕುಮಾರ್ ಅವರು ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ಬೆಳಿಗ್ಗೆ ಅಧಿವೇಶನ ಆರಂಭವಾಗುವ ಮುನ್ನಾ ಶಿವಕುಮಾರ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ನಗರದ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಿವಕುಮಾರ್ ಅವರು ಕೊನೆಯುಸಿರೆಳೆದಿದ್ದಾರೆ.
ಇಂದು ಬೆಳಿಗ್ಗೆ ಸದನ ಆರಂಭವಾಗುತ್ತಿದ್ದಂತೆ ಟೈಮ್ಸ್ ಆಫ್ ಇಂಡಿಯಾ ವರದಿಗಾರನ ಅಕಾಲಿಕ ನಿಧನಕ್ಕೆ ಸದನದಲ್ಲಿ ಸಂತಾಪ ಸೂಚಿಸಲಾಯಿತು.