ಜಿಲ್ಲಾ ಸುದ್ದಿ

ಇಸಿಸ್ ಬೆದರಿಕೆ ಸಂದೇಶ: ನಗರದೆಲ್ಲೆಡೆ ಬಿಗಿ ಭದ್ರತೆ

Lakshmi R

ಬೆಂಗಳೂರು: ನಗರದ ಪ್ರತಿಷ್ಠಿತ ಮಾಲ್‌ಗಳಲ್ಲಿ ಒಂದಾಗಿರುವ ಗಡುಡಾ ಮಾಲ್‌ಗೆ ಬೆಂಗಳೂರು ಕೇಂದ್ರ ವಿಭಾಗ ಡಿಸಿಪಿ ಸಂದೀಪ್ ಪಾಟೀಲ್ ಭೇಟಿ ನೀಡಿ, ಭದ್ರತಾ ಕ್ರಮಗಳ ಕುರಿತು ಪರಿಶೀಲನೆ ಮಾಡಿದರು.

ಇಸಿಸ್ ಉಗ್ರ ಸಂಘಟನೆ ನಂಟುಹೊಂದಿದ್ದ ಆರೋಪಿ ಮೆಹ್ದಿ ಮಸ್ರೂರ್ ಬಿಸ್ವಾಸ್‌ನನ್ನು ಕಳೆದ ಶನಿವಾರ ಜಾಲಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಬಂಧಿಸಲಾಗಿತ್ತು. ಬಿಸ್ವಾಸ್ ಬಂಧನದಿಂದ ಕೆಂಡಾಮಂಡಲವಾಗಿರುವ ಇಸಿಸ್ ಉಗ್ರರು, ಆತನ ಬಿಡುಗಡೆಗಾಗಿ ಬೆದರಿಕೆ ಒಡ್ಡಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಕೈಗೊಳ್ಳಲಾಗಿದೆ.

ಈ ಮಧ್ಯೆ ನಗರದ ಪ್ರಮುಖ ಮಾಲ್‌ಗಳು ಸೇರಿದಂತೆ, ಸಾರ್ವಜನಿಕ ಪ್ರದೇಶಗಳ ಸುತ್ತಮುತ್ತ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ನಗರದ ಪ್ರಧಾನ ಕೇಂದ್ರಸ್ಥಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಕೇಂದ್ರ ವಿಭಾಗದ ಡಿಸಿಪಿ ಸಂದೀಪ್ ಪಾಟೀಲ್ ಭೇಟಿ ನೀಡಿ ಭದ್ರತೆಯ ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂದೀಪ್ ಪಾಟೀಲ್, ನಗರದ ಪ್ರಮುಖ ಪ್ರದೇಶಗಳಲ್ಲಿ ಭದ್ರತೆ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಹೆದರುವ ಅಗತ್ಯವಿಲ್ಲ. ಸಾರ್ವಜನಿಕರ ಮಧ್ಯೆ ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಿದರು. ಅಲ್ಲದೆ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಈ ಕುರಿತು ವಿವರ ನೀಡುವಂತೆ ಕೇಳಿಕೊಂಡಿದ್ದಾರೆ.

SCROLL FOR NEXT