ಜಿಲ್ಲಾ ಸುದ್ದಿ

ಕೆಪಿಎಸ್ಸಿ ಖಾಲಿ ಹುದ್ದೆ ಶೀಘ್ರ ಭರ್ತಿ

Lakshmi R

ವಿಧಾನ ಪರಿಷತ್: ಕರ್ನಾಟಕ ಲೋಕ ಸೇವಾ ಆಯೋಗದ ಅಧ್ಯಕ್ಷ ಹುದ್ದೆ ಸೇರಿದಂತೆ ಆಯೋಗದ ಖಾಲಿ ಇರುವ 6 ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲು ಸರ್ಕಾರ ನಿರ್ಧರಿಸಿದೆ.

ರಾಜ್ಯದಲ್ಲಿ ಎಷ್ಟು ವೈದ್ಯಾಧಿಕಾರಿಗಳ ಹುದ್ದೆ ಖಾಲಿ ಇದೆ. ಈ ಹುದ್ದೆಗಳ ನೇಮಕಕ್ಕೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ಸದಸ್ಯ ಮಹಾಂತೇಶ ಕೌಜಲಗಿ ಅವರು ಕೇಳಿದ ಪ್ರಶ್ನೆಗೆ, ಕೆಪಿಎಸ್‌ಸಿಯಿಂದ ಹುದ್ದೆ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಸಭಾನಾಯಕ ಎಸ್.ಆರ್.ಪಾಟೀಲ ತಿಳಿಸಿದರು.

ಮಧ್ಯ ಪ್ರವೇಶಿಸಿದ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಕೆಪಿಎಸ್‌ಸಿಗೆ ಅಧ್ಯಕ್ಷರೂ ಇಲ್ಲ, ಸದಸ್ಯರೂ ಇಲ್ಲ. ಮತ್ತೆ ನೇಮಕ ಮಾಡಿಕೊಳ್ಳುವುದಾದರೂ ಹೇಗೆ ಎಂದು ಪ್ರಶ್ನಿಸಿದಾಗ, ಕೆಪಿಎಸ್‌ಸಿಗೆ ಸದ್ಯದಲ್ಲೇ ಅಧ್ಯಕ್ಷರು ಹಾಗೂ ಖಾಲಿ ಇರುವ ಆರು ಸದಸ್ಯರನ್ನು ನೇಮಕ ಮಾಡಲಾಗುವುದು ಎಂದು ಸಭಾ ನಾಯಕರು ಭರವಸೆ ನೀಡಿದರು.

ಈಗಾಗಲೇ 331 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು, 87 ದಂತ ಆರೋಗ್ಯಾಧಿಕಾರಿಗಳು ಹಾಗೂ 983 ತಜ್ಞ ವೈದ್ಯರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಲೋಕಸೇವಾ ಆಯೋಗಕ್ಕೆ ವಹಿಸಲಾಗಿದೆ ಎಂದು ಹೇಳಿದರು.

SCROLL FOR NEXT