ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಬಿಎಂಟಿಸಿ ಬಸ್ ಅಪಘಾತ: ನಾಲ್ವರು ಸಾವು

ಬಿಎಂಟಿಸಿ ಬಸ್ ಬ್ರೇಕ್ ವಿಫಲವಾಗಿ ಸರಣಿ ಅಪಘಾತ...

ಬೆಂಗಳೂರು: ಬಿಎಂಟಿಸಿ ಬಸ್ ಬ್ರೇಕ್ ವಿಫಲವಾಗಿ ಒನ್‌ವೇಗಿ ನುಗ್ಗಿದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಲಿಂಗರಾಜುಪರಂ ಬಳಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರಿಗೆ ತೀವ್ರವಾಗಿ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಶಿವಾಜಿನಗರದಿಂದ ಲಿಂಗಾರಾಜಪುರಂಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ ಲಿಂಗಾರಾಜಪುರಂ ಸಮೀಪ ಬ್ರೇಕ್ ಫೇಲ್ಯೂರ್ ಆಗಿದೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಬಸ್ ಒನ್‌ನೇಗೆ ನುಗ್ಗಿದೆ. ಈ ವೇಳೆ ಗೂಡ್ಸ್ ಗಾಡಿಗೆ ವೇಗವಾಗಿ ಗುದ್ದಿದೆ. ಗೂಡ್ಸ್‌ಗಾಡಿಯ ಹಿಂದೆ ನಿಂತಿದ್ದ ಬೈಕ್‌ಗೆ ಗೂಡ್ಸ್ ಗಾಡಿ ಗುದ್ದಿಗೆ.

ಈ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದರು. ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬರು ಸಾವನ್ನಪ್ಪಿದರು. ಈ ಮೂಲಕ ಸರಣಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಘಟನೆಯಿಂದಾಗಿ ಲಿಂಗರಾಜಪುರಂ ಬಳಿ ಆತಂಕದ ವಾತಾವರಣ ನಿರ್ಮಾಣವಾಯಿತು. ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel