ಬಿಡದಿ: ಸ್ಯಾಂಡಲ್ ವುಡ್ ನ ಹಿರಿಯ ನಟ ಅನಂತನಾಗ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಅನಂತನಾಗ್ ಅವರ ಕಾರು ರಾಮನಗರದ ಬಿಡದಿಯ ಹೆಜ್ಜಾಲ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಅನಂತನಾಗ್ ಅವರಿಗೆ ಯಾವುದೇ ತೊಂದರೆಯಾಗಿಲ್ಲ. ಆದರೆ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅನಂತನಾಗ್ ಪತ್ನಿ ಗಾಯತ್ರಿ ಅವರು ಮಾಧ್ಯಮವೊಂದಕ್ಕೆ ಸ್ಪಷ್ಟಪಡಿಸಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಐರಾವತ ಚಿತ್ರದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. ಶೂಟಿಂಗ್ ಮುಗಿಸಿ ಅನಂತನಾಗ್ ಅವರು ಬೆಂಗಳೂರಿಗೆ ಬರುತ್ತಿದ್ದ ವೇಳೆ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಬಳಿಕ ಇಂಡಿಕಾ ಕಾರಿಗೆ ಡಿಕ್ಕಿ ಹೊಡೆದಿದೆ.