ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಕಾರು-ಬಸ್ ಡಿಕ್ಕಿ: ಒಂದೇ ಕುಟುಂಬದ ಇಬ್ಬರು ಸಾವು

ಧರ್ಮಸ್ಥಳ ಸಮೀಪ ಗುರುವಾರ ಬೆಳಗ್ಗೆ ಬಸ್ ಮತ್ತು ಕಾರು ನಡುವೆ ನಡೆದ ಭೀಕರ...

ಬೆಳ್ಳಂಗಡಿ: ಧರ್ಮಸ್ಥಳ ಸಮೀಪ ಗುರುವಾರ ಬೆಳಗ್ಗೆ ಬಸ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಬೆಂಗಳೂರು ಆರ್.ಟಿ.ನಗರ ಸಮಾಪದ ಜಯಮಹಲ್ ನಿವಾಸಿ ರಾಜಮ್ಮ (50) ಹಾಗೂ ಕಾರಿನ ಚಾಲಕ, ಮಂಡ್ಯ ನಿವಾಸಿ ಪುನೀತ್ (27) ಮೃತರು. ರಾಜಮ್ಮ ಅವರ ಪುತ್ರ ಪ್ರಶಾಂತ್ (37) ಹಾಗೂ ಸೊಸೆ ರಾಧಾ (32) ಗಂಭೀರ ಗಾಯಗೊಂಡಿದ್ದು, ಇವರ ಪುತ್ರಿ ಯಾಶಿಕಾ (3) ಅಪಾಯವಿಲ್ಲದೆ ಪಾರಾಗಿದ್ದಾಳೆ.

ಕೆಎಸ್‌ಆರ್‌ಟಿಸಿ ಬಸ್ ಧರ್ಮಸ್ಥಳದಿಂದ ಮಡಿಕೇರಿ-ಮೈಸೂರಿಗೆ ತೆರಳುತ್ತಿದ್ದು, ಧರ್ಮಸ್ಥಳ ಸಮೀಪದ ಕಲ್ಲೇರಿ ಬಳಿಯ ಏರು ರಸ್ತೆಯಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ಬಸ್ ನಡಿಗೆ ಸಿಲುಕಿದ್ದರಿಂದ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಬಸ್‌ನ ಚಕ್ರಗಳು ಸ್ಫೋಟಗೊಂಡಿವೆ. ಸ್ಥಳೀಯರು ಕೂಡಲೇ ರಕ್ಷಣಾ ಕಾರ್ಯಾಚರಣೆ ನಜೆಸಿದ್ದಾರೆ. ಆದರೆ, ಅದಾಗಲೇ ಇಬ್ಬರು ಮೃತಪಟ್ಟಿದ್ದರು. ದಂಪತಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಬಸ್ ಚಾಲಕ ಹನುಮಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬದುಕುಳಿದ ಮಗು
ಕಾರಿನ ಹಿಂದಿನ ಆಸನದಲ್ಲಿ ತಂದೆ, ತಾಯಿಯೊಂದಿಗೆ ಇದ್ದ ಮಗು ಯಾವುದೇ ಗಾಯಗಳಿಲ್ಲದೆ ಪಾರಾಗಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಛಾವಣಿ ಕಿತ್ತು ಹೋಗಿದೆ. ಎದುರಿನ ಸೀಟಿಗೆ ಸಿಲುಕಿ ದಂಪತಿ ಕಾಲುಗಳು ನುಜ್ಜುಗುಜ್ಜಾಗಿವೆ. ಇದರಿಂದ ಮಧ್ಯದಲ್ಲಿದ್ದ ಮಗು ಪ್ರಾಣಾಪಾಯದಿಂದ ಪಾರಾಗಿದೆ.

ಮಗುವನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆ ಸಿಬ್ಬಂದಿ ಸೂಕ್ತ ಚಿಕಿತ್ಸೆ ನೀಡದರು. ಗಾಯಗೊಂಡಿರುವ ಪ್ರಶಾಂತ್ ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ