ಬೆಂಗಳೂರು: ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಸಹೋದರಿಯರಾದ ಕಾವ್ಯ(26) ಹಾಗೂ ಶಿಲ್ಪಾ(25) ಎಂಬುವವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಗಿರಿನಗರ ಠಾಣಾ ವ್ಯಾಪ್ತಿಯ ದ್ವಾರಕಾನಗರ 3ನೇ ಕ್ರಾಸ್ ಬನಶಂಕರಿ 3ನೇ ಹಂತದಲ್ಲಿರುವ ಮನೆಯೊಂದರಲ್ಲಿ ಈ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ ಮೊಬೈಲ್ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಅವರ ವಿರುದ್ಧ ಗಿರಿನಗರ ಠಾಣೆಯಲ್ಲಿ ದೂರು ದಾಖಲಾಗಿದೆ.