ಜಿಲ್ಲಾ ಸುದ್ದಿ

ಅತ್ಯಾಚಾರಗಳ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

Vishwanath S

ಬೆಂಗಳೂರು: ಇತ್ತೀಚೆಗೆ ರಾಜ್ಯದಲ್ಲಿ ನಡೆಯುತ್ತಿರುವ ಮಹಿಳೆಯರು ಹಾಗೂ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಗಳನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಬುಧವಾರ ಪ್ರತಿಭಟನೆಯನ್ನು ಕೈಗೊಂಡಿದೆ.

ಮಾಜಿ ಸಚಿವೆ ಶೋಭಾ ಕಂರದ್ಲಾಜೆ ನೇತೃತ್ವದಲ್ಲಿ ಹೊರಟ ಮೆರವಣಿಗೆಯಲ್ಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿಎಸ್ ಯಡಿಯೂರಪ್ಪ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಆರ್, ಅಶೋಕ್ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಶಶಿಕಲಾ ಜೊಲ್ಲೆ, ನಟಿ ತಾರಾ, ಮಾಳವಿಕ ಅವಿನಾಶ್ ಭಾಗವಹಿಸಿದ್ದರು.

ಬಿಜೆಪಿ ಕಚೇರಿಯಿಂದ ಸಿಎಂ ಗೃಹ ಕಚೇರಿ ಕೃಷ್ಣಾದವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದ ಪ್ರತಿಭಟನಾಕಾರರು ಇದೇ ವೇಳೆ ಮುಖ್ಯಮಂತ್ರಿಯವರ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ, ಶೇಷಾದ್ರಿಪುರಂ ಬಳಿ ಪ್ರತಿಭಟನಾಕಾರರನ್ನು ತಡೆದ ಪೊಲೀಸರು 20ಕ್ಕೂ ಹೆಚ್ಚು ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತರನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಿದರು.

ಪ್ರತಿಭಟನಾ ಮೆರವಣಿಗೆ ವೇಳೆ ಮಾತನಾಡಿದ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ. ಈ ಘಟನೆಗಳಿಗೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವರೇ ನೇರ ಹೊಣೆ ಹೋರಬೇಕು ಎಂದು ಕಿಡಿಕಾರಿದರು.

SCROLL FOR NEXT