ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ನಿರ್ಮಾಣ ಹಂತದ ಕಮಾನು ಕುಸಿತ: ಓರ್ವನ ಸಾವು

ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಅವಘಡ ಸಂಭವಿಸಿದ್ದು, ನಿರ್ಮಾಣ ಹಂತದ ಕಟ್ಟಡದ ಕಮಾನು ಕುಸಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಅವಘಡ ಸಂಭವಿಸಿದ್ದು, ನಿರ್ಮಾಣ ಹಂತದ ಕಟ್ಟಡದ ಕಮಾನು ಕುಸಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬೆಂಗಳೂರಿನ ಆನೇಕಲ್ ತಾಲ್ಲೂಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಆನೇಕಲ್‌ನ ಮಲಿಂಗ್ಯಾ ಗಾರ್ಡನ್ ಬಳಿಯಲ್ಲಿ ನಿರ್ಮಾಣವಾಗುತ್ತಿದ್ದ ಕಟ್ಟಡದ ಕಮಾನು ಇಂದು ಸಂಜೆ ದಿಢೀರ್ ಕುಸಿತಗೊಂಡಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅನೇಕಲ್ ಪೊಲೀಸರು ಅಗ್ನಿಶಾಮಕ ದಳದ ಸಿಬ್ಬಂದಿಯ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದ್ದು, ಅವಶೇಷಗಳಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ಇದೆ. ಹೀಗಾಗಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಅವಶೇಷಗಳಡಿಯಲ್ಲಿ ಸಿಲುಕಿರುವವರಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಜೆಸಿಬಿ ಯಂತ್ರಗಳ ಮೂಲಕವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ದೇಶವನ್ನು ಉದ್ದೇಶಿಸಿ ಮೋದಿ ಭಾಷಣ; ಪ್ರಧಾನಿ ಮಹಿಳೆಯರ ಕ್ಷಮೆಯಾಚಿಸಿದ್ದೇಕೆ?

ಹಾರ್ಮುಜ್ ಜಲಸಂಧಿ ಮೇಲೆ ಮತ್ತೆ ನಿರ್ಬಂಧ: ಟ್ಯಾಂಕರ್ ಮೇಲೆ ಇರಾನಿನ ಗನ್ ಬೋಟ್ ಗಳಿಂದ ಗುಂಡಿನ ದಾಳಿ! ಭಾರತೀಯ ಹಡಗುಗಳು ವಾಪಸ್!

ವಿರೋಧ ಪಕ್ಷಗಳ 'ಮಹಿಳಾ ವಿರೋಧಿ' ಮನಸ್ಥಿತಿ ಬಯಲು ಮಾಡಿ: ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಗಂಡನ ಜತೆ ಜಗಳ: ಕೋಪದಲ್ಲಿ ಬಾಲ್ಕನಿಯಿಂದ 1.5 ಕೋಟಿ ರೂ ಕ್ಯಾಶ್ ಎಸೆದ ಮಹಿಳೆ; Video ನೋಡಿ

ಅಮೆರಿಕಕ್ಕೆ 'ಸಮೃದ್ಧ ಯುರೇನಿಯಂ' ಹಸ್ತಾಂತರಿಸಲ್ಲ: ಖಡಕ್ ಸಂದೇಶ ಕೊಟ್ಟ ಇರಾನ್!

SCROLL FOR NEXT