ಬೆಳಗಾವಿ: ಟೈರ್ ಸ್ಫೋಟಗೊಂಡು ಟೆಂಪೊವೊಂದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 4ರ ಹೊನಗಾ ಎಂಬಲ್ಲಿ ಸಂಭವಿಸಿದೆ.
ಇಂದು ಬೆಳಗ್ಗೆ ಪ್ರಯಾಣಿಕರನ್ನು ಕರೆದೂಯ್ಯುತ್ತಿದ್ದ ಟೆಂಪೊದ ಟೈರು ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಬೆಳಗಾವಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.