mayor shanthakumari, tindlu basavaraju in swachatha andolan 
ಜಿಲ್ಲಾ ಸುದ್ದಿ

ಸ್ವಚ್ಛತಾ ಅಭಿಯಾನದ ಮೂಲಕ ಹುಟ್ಟುಹಬ್ಬ

ಪ್ರಧಾನಿ ಮೋದಿ ಅವರು ಕರೆ ನೀಡಿದ ಸ್ವಚ್ಛ ಭಾರತ ಅಭಿಯಾನಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ ಸಿಕ್ಕಿದೆ

ಬೆಂಗಳೂರು: ಉದ್ಯಮಿ ಹಾಗೂ ಸಮಾಜ ಸೇವಕ ತಿಂಡ್ಲು ಬಸವರಾಜು, ಶನಿವಾರ ತಮ್ಮ 63ನೇ ಹುಟ್ಟುಹಬ್ಬವನ್ನು ಸ್ವಚ್ಛತಾ ಅಭಿಯಾನ ನಡೆಸುವ ಮೂಲಕ ವಿನೂತವಾಗಿ ಆಚರಿಸಿಕೊಂಡರು.

ಅಭಿಮಾನಿಗಳು ಹಾಗೂ ಹಿತೈಷಿಗಳ ಬಳಗ ಬೆಳಗ್ಗೆ ವಿದ್ಯಾರಣ್ಯಪುರ ಸಮೀಪದ ತಿಂಡ್ಲು ಬಡಾವಣೆಯಲ್ಲಿ ಆಯೋಜಿಸಿದ್ದ ಈ ಸ್ವಚ್ಛತಾ ಅಭಿಯಾನಕ್ಕೆ ಮೇಯರ್ ಎನ್.ಶಾಂತಕುಮಾರಿ ಚಾಲನೆ ನೀಡಿದರು.

ಪ್ರಧಾನಿ ಮೋದಿ ಅವರು ಕರೆ ನೀಡಿದ ಸ್ವಚ್ಛ ಭಾರತ ಅಭಿಯಾನಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ ಸಿಕ್ಕಿದೆ. ತಿಂಡ್ಲು ಬಸವರಾಜು ಅವರು ತಮ್ಮ ಹುಟ್ಟು ಹಬ್ಬವನ್ನು ಸ್ವಚ್ಛತಾ ಅಭಿಯಾನಕ್ಕೆ ಮೀಸಲಿಟ್ಟಿರುವುದು ಇತರರಿಗೂ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬೆಂಗಳೂರು ನಗರ ಗಾರ್ಬೆಜ್ ಸಿಟಿ ಎಂಬ ಅಪಖ್ಯಾತಿಗೆ ಒಳಗಾಗುವಲ್ಲಿ ಸಾರ್ವಜನಿಕರ ನಿರ್ಲಕ್ಷ್ಯವೂ ಇದೆ. ಬಸವರಾಜು ಅವರ ಹಾಗೆ ಪ್ರತಿಯೊಬ್ಬರೂ ಸ್ವಚ್ಛತಾ ಅಭಿಯಾನಕ್ಕೆ ಸ್ಪಿಂದಿಸಿರೆ ಬೆಂಗಳೂರು ಸುಂದರ ನಗರ ಆಗುವುದರಲ್ಲಿ ಅನುಮಾನವೇ ಇಲ್ಲ ಎಂದರು.

ಬಸವರಾಜು ಅವರು ತಮ್ಮ ಬಡವಾಣೆಯ ಜನರಿಗೆ ಅನುಕೂಲ ಕಲ್ಪಿಸಲು ನಿರ್ಮಿಸುತ್ತಿರುವ ಸಾರ್ವಜನಿಕ ಶೌಚಾಲಯಗಳಿಗೆ ಉಪ ಮಹಾಪೌರ ಕೆ. ರಂಗಣ್ಣ ಶಂಕು ಸ್ಥಾಪನೆ ನೆರವೇರಿಸಿದರು. ಇದೇ ವೇಳೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಮಾಜಿ ಸಚಿವ ವಿ.ಸೋಮಣ್ಣ ಧ್ವಜಾರೋಹಣ ನೆರವೇರಿಸಿ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.

ತಿಂಡ್ಲು ಬಸವರಾಜು ಅವರ ಸಾಮಾಜಿಕ ಕಾರ್ಯಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಚನ್ನಗಿರಿ ಪಾಂಡೋಮಟ್ಟಿ ವಿರಕ್ತ ಮಠದ ಗುರಬಸವ ಸ್ವಾಮಿಜಿ ಗೌಡ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಅನ್ನಪೂರ್ಣಮ್ಮ ಬಿಜೆಪಿ ಮಹಿಳಾ ಮೋರ್ಚಾ ಮುಖಂಡರಾದ ಸುಜಾತರಾಣಿ, ಅಕ್ಕನಬಳಗದ ಕಾರ್ಯದರ್ಶಿ ಚಂದ್ರಿಕಾ ಪಾಟೀಲ್, ಸಮಾಜ ಸೇವಕಿ ಚಂದ್ರಮತಿ ಗಿರೀಶ್, ಉದ್ಯಮಿ ಓಂಕಾರ ಮೂರ್ತಿ, ಎಇಟಿ ಕಾರ್ಯದರ್ಶಿ
ಸುರೇಶ್ ಹಾಜರಿದ್ದರು.

ರಾಜಕೀಯ ಸ್ಥಾನಮಾನಕ್ಕೆ ಮನವಿ
ನಂತರ ನಡೆದ ಹುಟ್ಟು ಹಬ್ಬದ ಸಭಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ರೇಣುಕಾಚಾರ್ಯ, ಬಿಜೆಪಿ ರಾಜ್ಯ ಕಾರ್ಯದರ್ಶಿ ರವಿ ಮಾತನಾಡಿದರು. ಯಾವುದೇ ಜಾತಿ, ಧರ್ಮ, ಕೋಮು ಎನ್ನದೇ ಎಲ್ಲರಿಗೂ ಸಹಾಸ ಹಸ್ತ ನೀಡುವ ಬಸವರಾಜು ಅವರಂತಹ ಸಮಾಜ ಸೇವಕರು ರಾಜಕೀಯಕ್ಕೆ ಬರಬೇಕು. ಅವರಿಗೆ ರಾಜಕೀಯದಲ್ಲಿ ಸೂಕ್ತ ಸ್ಥಾನಮಾನಗಳು ಸಿಗಬೇಕೆಂದು ಹೇಳಿದರು.

ಸ್ಥಳೀಯ ಮುಖಂಡರಾದ ಮರಿಸ್ವಾಮಿ, ರುದ್ರೇಶ್, ತೂಲುಕು ಪಂಚಾಯಿತಿ ಅಧ್ಯಕ್ಷೆ ಅನ್ನಪೂರ್ಣಮ್ಮ, ಮುಂಬರುವ ಪಾಲಿಕೆ ಚುನಾವಣೆಯಲ್ಲಿ ಬಸವರಾಜು ಅವರಿಗೆ ಟಿಕೆಟ್ ನೀಡುವ ಅವ್ಯವಸ್ಥೆ ಆಗಬೇಕು ಎಂದು ವಿನಂತಿಸಿಕೊಂಡರು. ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿ, ಮಾಗಡಿ ಶಿವಕುಮಾರ್, ನಿವೃತ್ತ ಕೆ.ಎ.ಎಸ್ ಅಧಿಕಾರಿ ನಾಗೇಂದ್ರ, ಮಾಜಿ ಉಪ ಮಹಾಪೌರ ಪುಟ್ಟರಾಜು, ಉದ್ಯಮಿ ಬಸವರಾಜು ಹಾಜರಿದ್ದರು. ವಿರಕ್ತಮಠದ ಗುರುಬಸವ ಸ್ವಾಮೀಜಿ, ಬಂಡೆಮಠದ ಬಸವ ಲಿಂಗ ಸ್ವಾಮೀಜಿ, ಭದ್ರಮಠದ
ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!