ಆ್ಯಂಬುಲೆನ್ಸ್‌ ಅಪಘಾತ(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಆ್ಯಂಬುಲೆನ್ಸ್‌ಗೆ ಟ್ಯಾಂಕರ್ ಡಿಕ್ಕಿ: ನಾಲ್ವರ ದುರ್ಮರಣ

ಬೀದರ್‌ನ ಹುಮ್ನಾಬಾದ್ ತಾಲೂಕಿನ ಮುಳಖೇಡ ಗ್ರಾಮದ ಬಳಿ ಆ್ಯಂಬುಲೆನ್ಸ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ...

ಹುಮ್ನಾಬಾದ್: ಬೀದರ್‌ನ ಹುಮ್ನಾಬಾದ್ ತಾಲೂಕಿನ ಮುಳಖೇಡ ಗ್ರಾಮದ ಬಳಿ ಆ್ಯಂಬುಲೆನ್ಸ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಆ್ಯಂಬುಲೆನ್ಸ್‌ನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.

ಆ್ಯಂಬುಲೆನ್ಸ್‌ನಲ್ಲಿ ಜಿತೇಂದ್ರ ಎಂಬುವರ ಮೃತದೇಹವನ್ನು ಸಾಗಿಸಲಾಗುತ್ತಿತ್ತು. ಇಂದು ಬೆಳಗ್ಗೆ ಮುಳಖೇಡ ಗ್ರಾಮದ ಬಳಿ ಆ್ಯಂಬುಲೆನ್ಸ್ ಹಾಗೂ ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಈ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಮೃತಪಟ್ಟರೆ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ತೀವ್ರವಾಗಿ ಗಾಯಗೊಂಡಿರುವ ಇಬ್ಬರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜಿತೇಂದ್ರ ಎಂಬುವರ ಮೃತಪಟ್ಟಿದ್ದು ಅವರನ್ನು ಔರಾಂಗಾಬಾದ್‌ನಿಂದ ಹೈದರಾಬಾದ್‌ಗೆ ಸಾಗಿಸಲಾಗುತ್ತಿತ್ತು. ಹೈದರಾಬಾದ್‌ನಲ್ಲಿ ಅಂತ್ಯಸಂಸ್ಕಾರಕ್ಕೆ ಅಣಿ ಮಾಡಿಕೊಳ್ಳಲಾಗಿತ್ತು. ಹೀಗಾಗಿ ಆ್ಯಂಬುಲೆನ್ಸ್‌ನಲ್ಲಿ ಮೃತದೇಹವನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಆ್ಯಂಬುಲೆನ್ಸ್‌ನಲ್ಲಿ ಆರು ಮಂದಿ ಪ್ರಯಾಣಿಸುತ್ತಿದ್ದರು. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಹುಮ್ನಾಬಾದ್ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!