ಡಾ.ರಾಜ್‌ಕುಮಾರ್ ಪ್ರತಿಮೆಗೆ ಕಿಡಿಗೇಡಿಗಳಿಂದ ಅಪಮಾನ 
ಜಿಲ್ಲಾ ಸುದ್ದಿ

ಡಾ.ರಾಜ್‌ಕುಮಾರ್ ಪ್ರತಿಮೆಗೆ ಕಿಡಿಗೇಡಿಗಳಿಂದ ಅಪಮಾನ

ಅನಾವರಣ ಸ್ಥಿತಿಯಲ್ಲಿದ್ದ ಡಾ.ರಾಜ್‌ಕುಮಾರ್ ಪ್ರತಿಮೆಗೆ ಕಿಡಿಗೇಡಿಗಳ ಗುಂಪೊಂದು ಹಾನಿ...

ಬೆಂಗಳೂರು: ಡಾ.ರಾಜ್‌ಕುಮಾರ್ ಪ್ರತಿಮೆಗೆ ಕಿಡಿಗೇಡಿಗಳು ಅಪಮಾನ ಮಾಡಿರುವ ಘಟನೆ ಇಂದು ಬೆಳಿಗ್ಗೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ಡಾ.ರಾಜ್‌ಕುಮಾರ್ ಅಭಿಮಾನಿಗಳು ನಿರ್ಮಿಸಿದ್ದ ಈ ಪ್ರತಿಮೆಯು ನವೆಂಬರ್23ಕ್ಕೆ ಅನಾವರಣಗೊಳ್ಳಲು ಸಿದ್ದವಾಗಿತ್ತು.

ಅನಾವರಣ ಸ್ಥಿತಿಯಲ್ಲಿದ್ದ ಡಾ.ರಾಜ್‌ಕುಮಾರ್ ಪ್ರತಿಮೆಗೆ ಇಂದು ಬೆಳಗ್ಗೆ ಕಿಡಿಗೇಡಿಗಳ ಗುಂಪೊಂದು ಹಾನಿ ಮಾಡುವ ಮೂಲಕ ಅಪಮಾನ ಎಸಗಿದೆ. ಬಲಮುರಿ ಸೇವಾ ಸಮಿತಿಯಿಂದ ನಿರ್ಮಾಣಗೊಂಡು, ನವೆಂಬರ್ 23 ಕ್ಕೆ ಅನಾವರಣಗೊಳ್ಳಲು ಸಿದ್ದತೆ ನಡೆಸಲಾಗಿತ್ತು.

ಅಭಿಮಾನಿಗಳಿಂದ ನಿರ್ಮಾಣಗೊಂಡಿದ್ದ ಡಾ.ರಾಜ್ ಪುತ್ಥಳಿಗೆ ದುಷ್ಕರ್ಮಿಗಳ ಗುಂಪೊಂದು ಹಾನಿ ಮಾಡಿರುವುದು ಇಂದು ಬೆಳಗ್ಗೆ ತಿಳಿದುಬಂದಿದೆ. ಪುತ್ಥಳಿಗೆ ಹಾನಿ ಮಾಡಿರುವುದನ್ನು ಕಂಡ ಡಾ.ರಾಜ್ ಅಭಿಮಾನಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. ಅಲ್ಲದೆ ಪ್ರತಿಭಟನೆಯಲ್ಲಿ ಕನ್ನಡ ಪರ ಸಂಘಟನೆಗಳು ಭಾಗವಹಿಸಿದ್ದು, ದುಷ್ಕರ್ಮಿಗಳ ವಿರುದ್ದ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಧಾವಿಸಿರುವ ರಾಜರಾಜೇಶ್ವರಿನಗರ ಠಾಣಾ ಪೊಲೀಸರು ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಪರಿಶೀಲನೆ ಕೈಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಪುತ್ಥಳಿಯ ಸುತ್ತಮುತ್ತಲ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!