ಯುವಕರಿಗೆ ಥಳಿತ(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಯುವಕರನ್ನು ಬೆತ್ತಲೆಗೊಳಿಸಿ ಥಳಿಸಿದ ಶಾಸಕನ ಬೆಂಬಲಿಗರು

ಬೆಳಗಾವಿ: ಪ್ರೇಮ ವಿವಾದಕ್ಕೆ ಸಾಕ್ಷಿಯಾಗಿದ್ದಾರೆ ಎನ್ನಲಾದ ಯುವಕರಿಬ್ಬರನ್ನು ಶಾಸಕರೊಬ್ಬರ ಬೆಂಬಲಿಗರು ಕೊಠಡಿಯೊಂದರಲ್ಲಿ ಕೂಡಿಹಾಕಿ ಹಾಕಿ ಸ್ಟಿಕ್ ಮತ್ತಿತರ ಮಾರಕಾಸ್ತ್ರಗಳಿಂದ ಹಿಗ್ಗಾಮುಗ್ಗಾ ಥಳಿಸಿದ ಅಮಾನವೀಯ ಘಟನೆ ಬೆಳಗಾವಿ ತಾಲೂಕಿನ ಉಚಗಾಂವ ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಬೆಳಗಾವಿ ಗ್ರಾಮಾಂತರ ಶಾಸಕ ಸಂಜಯ ಪಾಟೀಲ ಅವರ ಬೆಂಬಲಿಗ ಸುರೇಶ ಘಟಗಿ ಸೇರಿದಂತೆ ಐವರು ಯುವಕರಿಬ್ಬರನ್ನು ಬೆತ್ತಲೆಗೊಳಿಸಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ದೃಶ್ಯಗಳನ್ನು ಮೊಬೈಲ್‌ನಲ್ಲಿ ಆರೋಪಿಗಳೇ ಸೆರೆ ಹಿಡಿದಿದ್ದಾರೆ. ಸುರೇಶ ಘಟಗಿ ಅವರ ಸಹೋದರನ ಪುತ್ರಿ ಶೋಭಾ ಘಟಗಿ ಮತ್ತು ಪ್ರಭಾಕರ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇವರ ಮದುವೆಗೆ ಈ ಇಬ್ಬರು ಯುವಕರು ಸಾಕ್ಷಿಯಾಗಿದ್ದರು. ಸುರೇಶ ಘಟಗಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಘಟನೆಗೂ ನನಗೂ ಯಾವುದೇ ರೀತಿಯ ಸಂಬಂಧ ಇಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದು ಪೊಲೀಸರಿಗೆ ಬಿಟ್ಟಿದ್ದು.
- ಸಂಜಯ ಪಾಟೀಲ
ಬೆಳಗಾವಿ ಗ್ರಾಮಾಂತರ ಶಾಸಕ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT