ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಬಳ ನಿರ್ಬಂಧಿಸಿ ಪಶು ಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಅಧಿಕಾರಿಗಳು ಮತ್ತು ಕಂಬಳ ಆಯೋಜಕರು ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘಿಸಿದಲ್ಲಿ ಅವರ ವಿರುದ್ಧ ಪಿಸಿಎ ಕಾಯಿದೆ-1960ರಂತೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಆದೇಶದಲ್ಲಿ ತಿಳಿಸಲಾಗಿದೆ. ಚೆನ್ನೈನ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯವರು ದಕ್ಷಿಣ ತನ್ನ ಡ ಜಿಲ್ಲೆಯಲ್ಲಿ ಜರಗುವ ಕಂಬಳ ಉತ್ಸವಗಳು ಕಾಯಿದೆಗೆ ವಿರುದ್ಧವಾಗಿದೆ ಎಂದು ಸುಪ್ರೀಂಕೋರ್ಟ್‌ನಲ್ಲಿ ವಾದಿಸಿದ್ದಾರೆ. ಈ ನೆಲೆಯಲ್ಲಿ ಜಿಲ್ಲೆಯಲ್ಲಿ ಕಂಬಳ ಆಯೋಜಿಸಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಸುಪ್ರೀಂಕೋರ್ಟ್ ತೀರ್ಪಿಗೆ ಅನುಗುಣವಾಗಿ ಕಂಬಳ ಆಯೋಜನೆ ನಿರ್ಬಂಧಿಸಿ ಪಶುಪಾಲನೆ ಇಲಾಖೆ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಎ.ಬಿ ಇಬ್ರಾಹಿಂ ತಿಳಿಸಿದ್ದಾರೆ.