ಅಭಿಷೇಕ್(28) 
ಜಿಲ್ಲಾ ಸುದ್ದಿ

ರೌಡಿ ಶೀಟರ್‌ನ ಕಗ್ಗೊಲೆ

ದುಷ್ಕರ್ಮಿಗಳ ಗುಂಪೊಂದು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದೆ..

ಬೆಂಗಳೂರು: ನಗರದ ಗಡಿಭಾಗ ಅತ್ತಿಬೆಲೆಯಲ್ಲಿ ಕಳೆದ ರಾತ್ರಿ ದುಷ್ಕರ್ಮಿಗಳ ಗುಂಪೊಂದು ರೌಡಿ ಶೀಟರ್ ಒಬ್ಬನನ್ನು ಲಾಂಗು ಮಚ್ಚಿನಿಂದ ಭೀಕರವಾಗಿ ಹತ್ಯೆ ಮಾಡಿದೆ.

ಅತ್ತಿಬೆಲೆಯ ನಿವಾಸಿಯಾಗಿ ಅಭಿಷೇಕ್(28) ಎಂಬಾತನನ್ನು ದುಷ್ಕರ್ಮಿಗಳ ಗುಂಪೊಂದು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದೆ. ಕಳೆದ ರಾತ್ರಿ ಎಂದಿನಂತೆ ಮನೆಗೆ ಬಂದ ಅಭಿಷೇಕ್ ಊಟ ಮುಗಿಸಿ ಮಲಗಿಕೊಂಡಿದ್ದನು.

ತಂದೆ ವಾಚ್‌ಮ್ಯಾನ್ ಕೆಲಸ ನಿರ್ವಹಿಸುತ್ತಿದ್ದು, ರಾತ್ರಿ ಪಾಳಿಗೆ ತೆರಳಿದ್ದರು. ತಾಯಿ ಸಂಬಂಧಿಕರನ್ನು ಭೇಟಿ ಮಾಡಲು ದೂರದ ಊರಿಗೆ ಹೋಗಿದ್ದರು. ಮನೆಯಲ್ಲಿ ಯಾರು ಇಲ್ಲದಿರುವುದನ್ನು ಸದುಪಯೋಗಪಡಿಸಿಕೊಂಡ ರೌಡಿ ಗುಂಪೊಂದು ಸುಮಾರು 1 ಗಂಟೆ ವೇಳೆಗೆ ಮಗಲಗಿದ್ದ ಅಭಿಷೇಕ್‌ನನ್ನು ಲಾಂಗು ಮಚ್ಚಿನಿಂದ ಹತ್ಯೆ ನಡೆಸಿ ಪರಾರಿಯಾಗಿದೆ.

ತಂದೆ ರಾತ್ರಿ ಪಾಳಿ ಮುಗಿಸಿಕೊಂಡು ಮನೆಗೆ ಹಿಂತಿರುಗಿದಾಗ ಮಗ ಶವವಾಗಿ ಪತ್ತೆಯಾಗಿದ್ದನ್ನು ಕಂಡು ಕೂಡಲೇ ಪೊಲೀಸರಿಗೆ ದೂರು ಸಲ್ಲಿಸದರು. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಮೃತ ಅಭಿಷೇಕ್ ವಿರುದ್ಧ ಒಂದು ದರೋಡೆ ಮತ್ತು 1 ಕೊಲೆ ಪ್ರಕರಣಗಳು ದಾಖಲಾಗಿದ್ದವು.

ಈ ಕುರಿತು ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ದುಷ್ಕರ್ಮಿಗಳಿಗೆ ಜಾಲಾ ಬೀಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT