ರೆವಿನ್ಯೂ ಸ್ಟ್ಯಾಂಪ್‌ 
ಜಿಲ್ಲಾ ಸುದ್ದಿ

ಮತ್ತೆ ರೆವೆನ್ಯೂ ಸ್ಟ್ಯಾಂಪ್‌

ಛಾಪಾ ಕಾಗದ ಹಗರಣದ ನಂತರ ಅಸ್ತಿತ್ವ ಕಳೆದುಕೊಂಡಿದ್ದ ರೆವಿನ್ಯೂ ಸ್ಟಾಂಪ್ ಬಳಕೆ ಪದ್ಧತಿ ರಾಜ್ಯದಲ್ಲಿ ಮತ್ತೆ ಚಾಲ್ತಿಗೆ...

ಬೆಂಗಳೂರು: ಛಾಪಾ ಕಾಗದ ಹಗರಣದ ನಂತರ ಅಸ್ತಿತ್ವ ಕಳೆದುಕೊಂಡಿದ್ದ ರೆವಿನ್ಯೂ ಸ್ಟಾಂಪ್ ಬಳಕೆ ಪದ್ಧತಿ ರಾಜ್ಯದಲ್ಲಿ ಮತ್ತೆ ಚಾಲ್ತಿಗೆ ಬರಲಿದೆ.

ಶ್ರೀಸಾಮಾನ್ಯರಿಗೆ  ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಕಡಿಮೆ ಮುಖಬೆಲೆಯ ಸ್ಟ್ಯಾಂಪ್‌ಗಳನ್ನು ಮುದ್ರಿಸಿ ಮಾರುಕಟ್ಟೆಗೆ ತರಲು ಕಂದಾಯ ಇಲಾಖೆ ನಿರ್ಧರಿಸಿದೆ.

ಕಂದಾಯ ಸಚಿವ ವಿ. ಶ್ರೀನಿವಾಸ ಪ್ರಸಾದ್ ಶುಕ್ರವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ. ಕರೀಂ ಲಾಲ್ ತೆಲಗಿ ಸೃಷ್ಟಿಸಿದ್ದ ಬಹುಕೋಟಿ ಮೌಲ್ಯದ ಛಾಪಾ ಕಾಗದ ಹಗರಣದ ನಂತರ ರೆವಿನ್ಯೂ ಸ್ಟ್ಯಾಂಪ್ ಬಳಕೆಯನ್ನು ನಿಷೇಧಿಸಲಾಗಿತ್ತು.  ಆದರೆ, ಇದರಿಂದ ಶ್ರೀಸಾಮಾನ್ಯರಿಗೆ ತೊಂದರೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಮರು ಬಳಕೆಗೆ ನಿರ್ಧರಿಸಲಾಗಿದೆ ಎಂದು ಸಚಿವರು ಹೇಳಿದರಿ. ರು.1, ರು.2, ರು.5 ಮುಖಬೆಲೆಯ ರೆವಿನ್ಯೂ ಸ್ಟ್ಯಾಂಪ್‌ಗಳನ್ನು ಮಾತ್ರ ಮತ್ತೆ ಚಲಾವಣೆಗೆ ತರಲಾಗುವುದು. ಇದರಿಂದ ಇಲಾಖೆಗೆ ಆದಾಯ ಸೃಷ್ಟಿಯಾಗುವುದರ ಜತೆಗೆ ಜನಸಾಮಾನ್ಯರಿಗೆ ಆಗುತ್ತಿದ್ದ ತೊಂದರೆಯನ್ನೂ ನಿವಾರಿಸಿದಂತಾಗುತ್ತದೆ ಎಂದು ಅವರು ಹೇಳಿದರು.

ಏನಿದು ಸಮಸ್ಯೆ?

ರಾಜ್ಯದಲ್ಲಿ ರೆವಿನ್ಯೂ ಸ್ಟ್ಯಾಂಪ್ ಬಳಕೆಯನ್ನು ನಿಷೇಧಿಸಲಾಗಿದ್ದರೂ ಕಂದಾಯ ಇಲಾಖೆ ಮತ್ತು ಬ್ಯಾಂಕ್ ವ್ಯವಹಾರಗಳಲ್ಲಿ ಚಾಲ್ತಿಯಲ್ಲಿತ್ತು. ನಿಗದಿತ ಅರ್ಜಿ ನಮೂನೆಗಳಲ್ಲಿ ಸ್ಟ್ಯಾಂಪ್ ಅಂಟಿಸುವುದಕ್ಕಾಗಿಯೇ ಪ್ರತ್ಯೇಕ ಜಾಗ ಬಿಡಲಾಗುತ್ತಿತ್ತು. ಹೀಗಾಗಿ ಗ್ರಾಮಾಂತರ ಪ್ರದೇಶಗಳಲ್ಲಿ ಮುಖಬೆಲೆಗಿಂತ ದುಪ್ಪಟ್ಟು ದರಕ್ಕೆ ಮಾರಲಾಗುತ್ತಿತ್ತು. ಹೈಕೋರ್ಟ್ ಸೂಚನೆಯಲ್ಲಿ ರಾಜ್ಯ ಸರ್ಕಾರ ಸ್ಟ್ಯಾಂಪ್ ಬಳಕೆ ಜಾರಿಗೆ ತಂದಿದ್ದರೂ ನಿಷೇಧವಿದೆ  ಎಬ ಕಾರಣ ನೀಡಿ ಸಾಮಾನ್ಯ ಜನರ ಸುಲಿಗೆ ಮಾಡಲಾಗುತ್ತಿತ್ತು. ಸರ್ಕಾರ ಈ ಬಗ್ಗೆ ಸೂಕ್ತ ಪ್ರಚಾರ ನಡೆಸದೇ ಇದ್ದುದರಿಂದ ಗೊಂದಲವಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರನ್ನು ಪ್ರಶ್ನಿಸಿದಾಗ ಅವರು, ಬಳಕೆ ಪುನರಾರಂಭಿಸುವುದನ್ನು ಖಚಿತ ಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!