ಬೆಂಗಳೂರು: 2.96 ಕೋಟಿ ರು. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಶ್ರೀರಾಮುಲು ವಿರುದ್ಧ ಬೆಂಗಳೂರಿನ 13ನೇ ಎಸಿಎಂಎಂ ಕೋರ್ಟ್ ಬುಧವಾರ ಶೋಧ (ಸರ್ಚ್) ವಾರೆಂಟ್ ಜಾರಿ ಮಾಡಿದೆ.
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಕೋರ್ಟ್ ನೋಟಿಸ್ ಜಾರಿ ಮಾಡಿದ್ದರೂ ಶ್ರೀರಾಮುಲು ಕೋರ್ಟ್‌ಗೆ ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್ ರಾಮುಲು ವಿರುದ್ಧ ವಾರೆಂಟ್ ಜಾರಿ ಮಾಡಿದೆ.
ಬಿ.ಎಸ್.ಆರ್ ಪಕ್ಷದ ಮೈಸೂರಿನ ಜಿಲ್ಲಾಧ್ಯಕ್ಷ ಸೋಮಶೇಕರ್ ಎಂಬುವರು ಶ್ರೀರಾಮುಲು ವಿರುದ್ಧ ಚೆಕ್ ಬೌನ್ಸ್ ದೂರು ದಾಖಲಿಸಿದ್ದರು.