ದಾವಣಗೆರೆ: ಜನಸಾಮಾನ್ಯರು, ಬಡವರ ಸಂಕಷ್ಟಕ್ಕೆ ಸ್ಪಂಧಿಸುತ್ತಿರುವ ಲೋಕಾಯುಕ್ತದಂಥ ಪ್ರಾಮಾಣಿಕರ ಸಂಸ್ಥೆಯನ್ನೇ ಕೆಲವು ಭ್ರಷ್ಟರು ಮಚ್ಚಿಸಲು ಹುನ್ನಾರ ನಡೆಸಿದ್ದು, ಇದಕ್ಕೆ ಕನ್ನಡಿಗರು ಅವಕಾಶ ನೀಡಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ತಿಳಿಸಿದರು.
ಅವರು ಇಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿದ್ದ ಭುವನೇಶ್ವರಿಯ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ, ಲೋಕಾಯುಕ್ತ ಸಂಸ್ಥೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದೆ. ಇಂತಹ ಸಂಸ್ಥೆಯನ್ನು ಮುಚ್ಚಿಸಲು ಕೆಲವು ಭ್ರಷ್ಟರು ಮುಂದಾಗಿದ್ದಾರೆ. ಈಗಾಗಲೇ ಕರಡು ಮಸೂದೆ ರೂಪಿಸಿ, ಮುಂದಿನ ಅಧಿವೇಶನದಲ್ಲಿ ಮಂಡಿಸಿ, ಅದಕ್ಕೆ ಅಂಗೀಕಾರ ಪಡೆಯುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.