ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಮರಿಮೊಮ್ಮಗ ಮಧುಕೇಶ್ವರ ಅವರ ಮದುವೆ ಸಮಾರಂಭ 
ಜಿಲ್ಲಾ ಸುದ್ದಿ

ಬೆಂಗಳೂರಿನಲ್ಲಿ ಮೊರಾರ್ಜಿ ಮರಿಮೊಮ್ಮಗನ ಮದುವೆ

ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರ ಮರಿ ಮೊಮ್ಮಗ ಮಧುಕೇಶ್ವರ ದೇಸಾಯಿ ಅವರ ಮದುವೆ ಸಮಾರಂಭ ಭಾನುವಾರ ಬೆಂಗಳೂರಿನಲ್ಲಿ ನೆರವೇರಿತು.

ಬೆಂಗಳೂರು: ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರ ಮರಿ ಮೊಮ್ಮಗ ಮಧುಕೇಶ್ವರ ದೇಸಾಯಿ ಅವರ ಮದುವೆ ಸಮಾರಂಭ ಭಾನುವಾರ ಬೆಂಗಳೂರಿನಲ್ಲಿ ನೆರವೇರಿತು.

ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರು ಕೂಡ ಆಗಿರುವ ಮಧುಕೇಶ್ವರ ದೇಸಾಯಿ ಅವರು ಕಿಲೋಸ್ಕರ್ ಸಂಸ್ಥೆಯ ಮಾಲೀಕರ ಮಗಳು ಮತ್ತು ಮುಂಬೈ ಮೂಲದ ಪತ್ರಕರ್ತೆಯಾದ ಸ್ನೇಹ ಮೆನನ್ ರನ್ನು ಇಂದು ವಿವಾಹವಾದರು. ಬೆಂಗಳೂರಿನ ಹೆಬ್ಬಾಳದಲ್ಲಿರುವ ಕಾಫಿಬೋರ್ಡ್ ಲೇಔಟ್‌ನಲ್ಲಿರುವ ಕಿರ್ಲೋಸ್ಕರ್ ಹೌಸ್‌ನಲ್ಲಿ ಮಧುಕೇಶ್ವರ ದೇಸಾಯಿ ಮತ್ತು ಸ್ನೇಹ ಮೆನನ್ ವಿವಾಹ ಸಮಾರಂಭವನ್ನು ಆಯೋಜಿಸಲಾಗಿತ್ತು.

ಸಮಾರಂಭಕ್ಕೆ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ, ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ,  ಕೇಂದ್ರ ಸಚಿವ ಅನಂತ್ ಕುಮಾರ್, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಮತ್ತು ಮಾಜಿ ಶಾಸಕ ವಿ.ಸೋಮಣ್ಣ ಅವರು ಸೇರಿದಂತೆ ವಿವಿಧ ಗಣ್ಯರು ಆಗಮಿಸಿದ್ದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಎಲ್‌ಕೆ ಅಡ್ವಾಣಿ ಅವರು, ಬೆಂಗಳೂರಿಗೂ ನನಗೂ ನಿಕಟ ಸಂಬಂಧವಿದ್ದು, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಎರಡು ತಿಂಗಳಿಗೂ ಹೆಚ್ಚು ಕಾಲವನ್ನು ಇಲ್ಲಿನ ಜೈಲಿನಲ್ಲಿ ಕಳೆದಿದ್ದೇನೆ ಎಂದು ತಮ್ಮ ಹಳೆಯ ದಿನಗಳನ್ನು ಮೆಲುಕು ಹಾಕಿದರು.

'ಬೆಂಗಳೂರಿಗೆ ಬಂದು ತುಂಬಾ ದಿನಗಳಾಗಿದ್ದವು. ಅಲ್ಲದೆ ಬರುವಂಥ ಸಂದರ್ಭಗಳು ಎದುರಾಗಿರಲಿಲ್ಲ. ಹಿಂದೆ ಜನಚೇತನ ಯಾತ್ರೆ ವೇಳೆ ಇಲ್ಲಿಗೆ ಆಗಮಿಸಿದ್ದೆ. ಈಗ ಮಧು ಮದುವೆ ನನ್ನನ್ನು ಬೆಂಗಳೂರಿಗೆ ಕರೆತಂದಿದೆ ಎಂದು ಹೇಳಿದರು.

ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಕುಟುಂಬದ ಕುಡಿಯಾಗಿರುವ ಮಧುಕೇಶ್ವರ ದೇಸಾಯಿ ಜಗದೀಶ್ ದೇಸಾಯಿ ಅವರ ಪುತ್ರರಾಗಿದ್ದು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿದ್ದಾರೆ. ಅಲ್ಲದೆ ಈ ಹಿಂದೆ ಎಲ್‌ಕೆ ಅಡ್ವಾಣಿ ಅವರು ಹಮ್ಮಿಕೊಂಡಿದ್ದ ಜನಚೇತನ ಯಾತ್ರೆಯ ಸಂದರ್ಭದಲ್ಲಿಯೂ ಕರ್ನಾಟಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಧುಕೇಶ್ವರ ದೇಸಾಯಿ ಅವರು ಮುಂದಾಳತ್ವ ವಹಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!