ಭ್ರಷ್ಟ, ಅನೈತಿಕ ರಾಜಕೀಯದ ರೂಪ 'ಡಿಕೆಶಿ': ಹಿರೇಮಠ್
ಇಂಧನ ಸಚಿವ ಡಿ.ಕೆ ಶಿವಕುಮಾರ್ ...
ಹುಬ್ಬಳ್ಳಿ: ಇಂಧನ ಸಚಿವ ಡಿ.ಕೆ ಶಿವಕುಮಾರ್ ಭ್ರಷ್ಟ, ಅನೈತಿಕ ರಾಜಕೀಯದ ರೂಪ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್ ಹಿರೇಮಠ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅನೇಕ ಅಕ್ರಮಗಳನ್ನು ಮಾಡಿದ್ದು, ಅಕ್ರಮಗಳ ಬಗ್ಗೆ ವಿಚಾರಣೆ ಆಗಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ಡಿಕೆಶಿ ಅಕ್ರಮಗಳ ಬಗ್ಗೆ ವಿಚಾರಣೆ ನಡೆಸಬೇಕು. ವಿಚಾರಣೆಗಾಗಿ ವಿಶೇಷ ಕೋರ್ಟ್ ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಡಿಕೆಶಿ ಅಕ್ರಮಗಳ ಬಗ್ಗೆ ವಿಚಾರಣೆ ನಡೆಸಲು ವಿಶೇಷ ಕೋರ್ಟ್ ಸ್ಥಾಪಿಸದಿದ್ದರೆ, ಬಿಜೆಪಿಗೆ ಆದ ಗತಿ ಕಾಂಗ್ರೆಸ್ ಸರ್ಕಾರಕ್ಕೂ ಆಗುತ್ತದೆ ಎಂದು ಅವರು ಹೇಳಿದ್ದಾರೆ.
ಇದರ ನಡುವೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹಿರೇಮಠ್, ಪ್ರಧಾನಿ ನರೇಂದ್ರ ಮೋದಿ ಕಾರ್ಪೋರೇಟರ್ ವಲಯದ ಕೈಗೊಂಬೆ. ಕೇಂದ್ರ ಬಿಜೆಪಿ ಸರ್ಕಾರ ಬಹಿರಂಗ ಶುದ್ಧಿಗಿಂತ ಅಂತರಂಗ ಶುದ್ಧಿಕರಿಸಲಿ. ಅಂತರಂಗವೇ ಶುದ್ಧಿ ಇಲ್ಲದಿದ್ದರೇ ಬಹಿರಂಗ ಶುದ್ಧಿ ಸಾದ್ಯವಿಲ್ಲ.
ಹಾಗಾಗಿ, ಮೋದಿ ನೇತೃತ್ವದ ಸರ್ಕಾರ ಭ್ರಷ್ಟರಾದ ಸಂಸದ ಬಿ.ಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರನ್ನು ಅಧಿಕಾರದಿಂದ ಹೊರಗಿಡಲಿ ಎಂದು ಆಗ್ರಹಿಸಿದ್ದಾರೆ.