ಗುಲ್ಬರ್ಗಾ ಬಳಿ ಭೀಕರ ಅಪಘಾತ: 6 ಸಾವು
ಗುಲ್ಬರ್ಗಾದ ಚಿತ್ತಾಪುರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಬೊಲೆರೋ ಕಾರು ಮತ್ತು ಟ್ಯಾಂಕರ್ ನಡುವೆ ಮುಖಾ ಮುಖಿ ಡಿಕ್ಕಿ ಸಂಭವಿಸಿದೆ.
ಗುಲ್ಬರ್ಗಾ: ಗುಲ್ಬರ್ಗಾದ ಚಿತ್ತಾಪುರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಬೊಲೆರೋ ಕಾರು ಮತ್ತು ಟ್ಯಾಂಕರ್ ನಡುವೆ ಮುಖಾ ಮುಖಿ ಡಿಕ್ಕಿ ಸಂಭವಿಸಿದೆ.
ಗುಲ್ಬರ್ಗಾದ ಚಿತ್ತಾಪರ ತಾಲ್ಲೂಕಿನ ಕುಂಬಾರ ಹಳ್ಳಿ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಬೊಲೆರೋ ವಾಹನದಲ್ಲಿದ್ದ 6 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕಾರಿನಲ್ಲಿ ಮತ್ತೆ ಇಬ್ಬರು ಸಿಲುಕಿರುವ ಶಂಕೆ ಇದ್ದು, ಅಪಘಾತದ ರಭಸಕ್ಕೆ ಬೊಲೆರೋ ವಾಹನ ನಜ್ಜುಗುಜ್ಜಾಗಿದೆ. ಹೀಗಾಗಿ ಕಾರಿನಲ್ಲಿ ಸಿಲುಕಿರುವ ಶವಗಳನ್ನು ಹೊರತೆಗೆಯಲು ತಡವಾಗುತ್ತಿದೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ವಾಡಿ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಬೊಲೆರೋ ವಾಹನ ವೇಗವಾಗಿ ಆಗಮಿಸಿ ಟ್ಯಾಂಕರ್‌ಗೆ ಡಿಕ್ಕಿ ಹೊಡೆಯಿತು ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ.