ಮರೂರು ಹ್ಯಾಂಡ್ಪೋಸ್ಟ್ ಬಳಿ ಭೀಕರ ಅಪಘಾತ; 3 ಸಾವು
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಮರೂರು ಹ್ಯಾಂಡ್ಪೋಸ್ಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು...
ರಾಮನಗರ: ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಮರೂರು ಹ್ಯಾಂಡ್ಪೋಸ್ಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವಿಗೀಡಾಗಿದ್ದಾರೆ.
ಬುಧವಾರ ಬೆಳಗ್ಗೆ 7.45ಕ್ಕೆ ಸರ್ಕಾರಿ ಬಸ್, ಫೋರ್ಡ್ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.
ಸಾವನ್ನಪ್ಪಿದವರಲ್ಲಿ ಇಬ್ಬರು ಮಹಿಳೆಯರಾಗಿದ್ದಾರೆ. ಇಬ್ಬರು ಗಾಯಾಳುಗಳನ್ನು ನೆಲಮಂಗಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.
ಅಪಘಾತ ಸ್ಥಳಕ್ಕೆ ಕುದೂರು ಠಾಣೆ ಪೊಲೀಸರ ಭೇಟಿ ನೀಡಿ , ಪರಿಶೀಲನೆ ನಡೆಸುತ್ತಿದ್ದಾರೆ.