ತಮಿಳುನಾಡಿಗೆ ಬಸ್ ಸಂಚಾರ ಆರಂಭ
ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಅವರಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದ...
ಬೆಂಗಳೂರು: ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಅವರಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದ ಹಿನ್ನೆಲೆಯಲ್ಲಿ ಸ್ಧಗಿತಗೊಂಡಿದ್ದ 417 ಬಸ್‌ಗಳ ಸಂಚಾರವನ್ನು ಬುಧವಾರ ಸಂಜೆಯಿಂದ ಮತ್ತೆ ಆರಂಭಿಸಲಾಗಿದೆ.
ತಮಿಳುನಾಡಿನ ಸಾರಿಗೆ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿದ್ದು, ಅಲ್ಲಿ ಯಾವುದೇ ಗಲಾಟೆ ಇಲ್ಲದ ಹಿನ್ನೆಲೆಯಲ್ಲಿ ಎಲ್ಲ ಬಸ್‌ಗಳ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ. ಬಸ್‌ಗಳಿಗೆ ಹಾಗೂ ಸಿಬ್ಬಂದಿಗೆ ಇದುವರೆಗೂ ಯಾವುದೇ ತೊಂದರೆಯಾಗಿಲ್ಲ. ಅವರ ಸುರಕ್ಷತೆಗೆ ಸಾರಿಗೆ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಂಡಿದ್ದಾರೆ ಎಂದು ಕೆಎಸ್‌ಆರ್‌ಟಿಸಿಯ ಹಿರಿಯ ಅಧಿಕಾರಿ ಎನ್. ಸಂಗಪ್ಪ ತಿಳಿಸಿದ್ದಾರೆ.