ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ನಟನ ಪತ್ನಿಗೆ ನಿರ್ಮಾಪಕನ ಕಿರುಕಳ

ಚಲನಚಿತ್ರ ನಟನ ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಮೇಲೆ ಚಿತ್ರ ನಿರ್ಮಾಪಕ ಸತ್ಯ...

ಸಾಂದರ್ಭಿಕ ಚಿತ್ರ
Mainashree
Updated On : 12 Oct 2014, 8:53 am

ಬೆಂಗಳೂರು: ಚಲನಚಿತ್ರ ನಟನ ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಮೇಲೆ ಚಿತ್ರ ನಿರ್ಮಾಪಕ ಸತ್ಯ ಎಂಬುವರ ವಿರುದ್ದ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸತ್ಯ ನಿರ್ಮಿಸುತ್ತಿರುವ ಚಿತ್ರದಲ್ಲಿ ದೂರು ನೀಡಿದ ಮಹಿಳೆಯ ಪತಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರೀಕರಣಕ್ಕೆ ತೆರಳಿದ್ದಾಗ ನಿರ್ಮಾಪಕರು ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಪತ್ನಿ ಜತೆ ಅಸಭ್ಯ ವರ್ತನೆಯನ್ನು ಪ್ರಶ್ನಿಸಿದ್ದರಿಂದ ನಿರ್ಮಾಪಕ, ಮನೆ ಬಳಿ ಬಂದು ಗಲಾಟೆ ಮಾಡಿದ್ದರು. ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದ ಕಾರಣ ಅಲ್ಲಿಂದ ಹೊರಟು ಹೋಗಿದ್ದರು.

ಆದರೆ, ಮತ್ತೆ ಮೊಬೈಲ್ ಫೋನ್ಗೆ ಕರೆ ಮಾಡಿದ ಸತ್ಯ, ಪೊಲೀಸರಿಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಸಿದ ಹಿನ್ನೆಲೆಯಲ್ಲಿ ನೊಂದ ಮಹಿಳೆ ಪತಿ ಹೇಳಿಕೆ ನೀಡಿದ್ದಾರೆ. ದೂರಿನ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕೆಂಗೇರಿ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement